ಜಿಲ್ಲಾ ಸುದ್ದಿ

ಡ್ರೆಸ್‍ಕೋಡ್ ವಿರೋಧಿಸಿ ಪ್ರತಿಭಟನೆ

ಕಾಲೇಜಿನಲ್ಲಿ ಡ್ರೆಸ್ ಕೋಡ್ ನಿರ್ಬಂಧ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುಮಾರ-ಸ್ವಾಮಿ ಲೇಔಟ್‍ನಲ್ಲಿರುವ ದಯಾ-ನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸೋಮವಾರ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು...

ಡ್ರೆಸ್‍ಕೋಡ್ ವಿರೋಧಿಸಿ ಪ್ರತಿಭಟನೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಕಾಲೇಜಿನಲ್ಲಿ ಡ್ರೆಸ್ ಕೋಡ್ ನಿರ್ಬಂಧ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುಮಾರ-ಸ್ವಾಮಿ ಲೇಔಟ್‍ನಲ್ಲಿರುವ ದಯಾ-ನಂದ ಸಾಗರ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸೋಮವಾರ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಡ್ರೆಸ್ ಕೋಡ್ ಸರಿಯಲ್ಲ. ಅದನ್ನು ಹಿಂಪಡೆಯಬೇಕು. ವಾಹನ ನಿಲುಗಡೆಗೆ ಹೆಚ್ಚು ಶುಲ್ಕ ವಸೂಲಿ ಮಾಡಲಾಗುತ್ತಿದೆ. ಅದನ್ನು ಕಡಿಮೆ ಮಾಡಬೇಕು. ಆಂತರಿಕ ಅಂಕಗಳನ್ನು 8 ಯುನಿಟ್ ಮಾಡಲಾಗುತ್ತದೆ. ಇದರಿಂದ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಗೆ ಸಮಯ ಸಿಗುವುದಿಲ್ಲ.

ಹಾಗಾಗಿ ಅದನ್ನು 2 ಕ್ಕೆ ಇಳಿಸಬೇಕು. ವ್ಯಾಸಂಗ ಮುಗಿದ ನಂತರ ವರ್ಗಾವಣೆ ಪತ್ರದ ಜತೆ ತಮಗೆ ಸೇರಿದೆ ಅಗತ್ಯ ದಾಖಲೆಗಳನ್ನು ನೀಡಬೇಕು. ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ಓಡಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ಕ್ರಮ ಕೈಗೊಳ್ಳದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕಾಗಮಿಸಿದ ಸಂಸ್ಥೆ ನಿರ್ದೇಶಕ ಶರ್ಮಾ, ಆಡಳಿತ ಮಂಡಳಿ ಜತೆ ಚರ್ಚಿಸಿ ಕ್ರಮಕೈಗೊಳ್ಳವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.