ಸಿಗರೇಟ್ ಹೊಗೆ ಸಂಬಂಧ ಕೊಲೆ
ಸಿಗರೇಟ್ ಸೇದಿದ ಹೊಗೆ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಯುವಕರ ಗುಂಪುಗಳ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ...

ಬೆಂಗಳೂರು: ಸಿಗರೇಟ್ ಸೇದಿದ ಹೊಗೆ ಬಿಡುವ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಯುವಕರ ಗುಂಪುಗಳ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.
ಮಂಗಳೂರು ಮೂಲದ ಶಶಾಂಕ್ (26) ಕೊಲೆಯಾದ ಕಾಲ್ ಸೆಂಟರ್ ಉದ್ಯೋಗಿ. ಈತ ಹಲವು ವರ್ಷಗಳಿಂದ ರಾಮಮೂರ್ತಿ ನಗರದಲ್ಲಿ ವಾಸಿಸುತ್ತಿದ್ದ. ಸೋಮವಾರ ಬೆಳಗ್ಗೆ ಸ್ನೇಹಿತರೊಂದಿಗೆ ಮನೆ ಸಮೀಪದ ಸಿಗ್ನಲ್ ಬಳಿಯ ಅಂಗಡಿಯಲ್ಲಿ ಚಹಾ ಕುಡಿಯಲು ಹೋದಾಗ ಘಟನೆ ಸಂಭವಿಸಿದೆ.
ಅಂಗಡಿಯಲ್ಲಿ ಮತ್ತೊಂದು ಗುಂಪಿನ ನಾಲ್ಕೈದು ಯುವಕರು ಸಹ ಟೀ ಕುಡಿಯುತ್ತಾ, ಸಿಗರೇಟ್ ಸೇದುತ್ತಿದ್ದರು.ಈ ವೇಳೆ ಹೊಗೆಯನ್ನು ಶಶಾಂಕ್ ಹಾಗೂ ಆತನ ಸ್ನೇಹಿತರ ಕಡೆಗೆ ಬಿಡುತ್ತಿದ್ದರು. ಈ ವಿಚಾರವಾಗಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಜಗಳವಾಗಿದೆ. ಜಗಳ ಹಲ್ಲೆಗೆ ತಿರುಗಿದೆ. ಎದುರಾಳಿ ಗುಂಪಿನ ನಾಲ್ವರಲ್ಲಿ ಓರ್ವನ ಮೇಲೆ ಶಶಾಂಕ್ ಸ್ನೇಹಿತ ಹಲ್ಲೆ ಮಾಡಿದ್ದಾನೆ.
ಇದರಿಂದ ಕೋಪಗೊಂಡ ಎದುರಾಳಿ ಗುಂಪಿನ ನಾಲ್ವರು ಯುವಕರು ಶಶಾಂಕ್ ಮತ್ತು ಆತನ ಸ್ನೇಹಿತರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾರೆ. ಶಶಾಂಕ್ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ. ತಕ್ಷಣ ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹತ್ಯೆ ಪ್ರಕರಣ ಸಂಬಂಧ ರಾಮಮೂರ್ತಿನಗರ ಪೊಲೀಸರು ಡ್ಯಾನಿಯಲ್, ವಾಸು, ಅಜಯ್ ಎಂಬುವವರನ್ನು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಇತರೆ ಆರೋಪಿಗಳಿಗಾಗಿ ತನಿಖೆ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


