ಮೆಟ್ರೋ ಸಂಚಾರ-2 ಗಂಟೆ ಹೆಚ್ಚಳ
ಪೀಣ್ಯ ಹಾಗೂ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಪಿಗೆ ರಸ್ತೆಯಿಂದ ನಾಗಸಂದ್ರದವರೆಗೆ ಮೆಟ್ರೋ ರೈಲಿನ ಸಂಚಾರ ಅವಧಿಯನ್ನು ಹೆಚ್ಚಿಸಲಾಗಿದೆ.

ಬೆಂಗಳೂರು: ಪೀಣ್ಯ ಹಾಗೂ ಸುತ್ತಮುತ್ತಲ ಕೈಗಾರಿಕಾ ಪ್ರದೇಶಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಂಪಿಗೆ ರಸ್ತೆಯಿಂದ ನಾಗಸಂದ್ರದವರೆಗೆ ಮೆಟ್ರೋ ರೈಲಿನ ಸಂಚಾರ ಅವಧಿಯನ್ನು ಹೆಚ್ಚಿಸಲಾಗಿದೆ.
ಈ ನಿಟ್ಟಿನಲ್ಲಿ ಸಂಪಿಗೆ ರಸ್ತೆ- ನಾಗಸಂದ್ರ ನಡುವಿನ ಮಾರ್ಗದಲ್ಲಿ ಮಂಗಳವಾರದಿಂದ ನಮ್ಮ ಮೆಟ್ರೋ ರೈಲು ಬೆಳಿಗ್ಗೆ 5 ರಿಂದ ರಾತ್ರಿ 11 ರ ವರೆಗೆ ಸಂಚಾರ ಆರಂಭಿಸಿದೆ. ಈ ಭಾಗದಲ್ಲಿ ಸಂಚರಿಸುವ ಪ್ರಯಾಣಿಕರ ಮನವಿ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಬೆಳಿಗ್ಗೆ ಹಾಗೂ ಸಂಜೆ ತಲಾ ಒಂದು ಗಂಟೆ ಕಾಲ, ಸೇರಿ ಒಟ್ಟು 2 ಗಂಟೆಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಈ ಮಾರ್ಗ ಒಟ್ಟು 13 ಕಿ.ಮಿ ಉದ್ದ ಇದ್ದು ರೈಲು ಇಷ್ಟು ದಿನ ಬೆಳಿಗ್ಗೆ 6 ರಿಂದ ರಾತ್ರಿ 10 ವರೆಗೆ ರೈಲು ಸಂಚರಿಸುತ್ತಿತ್ತು. ಆದರೆ ಮೆಟ್ರೋ ರೈಲಿನ ಸೇವೆಯನ್ನು ಎರಡು ಗಂಟೆಗಳ ಕಾಲ ವಿಸ್ತರಣೆ ಡಿಸೆಂಬರ್ 1 ರಿಂದಲೇ ಜಾರಿಗೆ ಬರುವಂತೆ ಮಾಡಲಾಗಿದೆ.
ಬೆಳಿಗ್ಗೆ 5 ರಿಂದ 8 ಗಂಟೆಯವರೆಗೆ 15 ನಿಮಿಷಕ್ಕೊಂದು ರೈಲು ಬೆಳಿಗ್ಗೆ 8 ರಿಂದ ರಾತ್ರಿ 8 ವರೆಗೆ 10 ನಿಮಿಷಕ್ಕೊಂದು ಹಾಗೂ ರಾತ್ರಿ 8 ರಿಂದ ರಾತ್ರಿ 11 ಗಂಟೆವರೆಗೆ 15 ನಿಮಿಷಕ್ಕೊಂದು ರೈಲು ಸಂಚರಿಸಲಿವೆ. ಇದರಿಂದ ಪೀಣ್ಯ ಇಂಡಸ್ಟ್ರಿ, ಜಾಲಹಳ್ಳಿ ಕ್ರಾಸ್, ಟಿವಿಎಸ್ ಕ್ರಾಸ್, ಎನ್ ಟಿಟಿಎಫ್, ಪೀಣ್ಯ 2 ನೇ ಹಂತದ ನಿವಾಸಿಗಳಿಗೆ ಹೆಚ್ಚು ಉಪಯುಕ್ತವಾಗಲಿದೆ. ರೈಲಿನ ವೇಳಾಪಟ್ಟಿ ಬದಲಾಗಿರುವ ಬಗ್ಗೆ ಆ ಮಾರ್ಗದ ಎಲ್ಲಾ ನಿಲ್ದಾಣಗಳಲ್ಲೂ ಅಲ್ಲಲ್ಲಿ ಫ್ಲೆಕ್ಸ್ ಹಾಕೀ ಜನರಲ್ಲಿ ಅರಿವು ಮೂಡಿಸಲಾಗಿದೆ.
ಜನರ ಬೇಡಿಕೆ ಮೇರೆಗೆ ರೈಲುಗಳ ಅವಧಿಯನ್ನು ವಿಸ್ತರಿಸಿದ್ದು, ಮುಂದಿನ 2 ತಿಂಗಳುಗಳ ಕಾಲ ಪ್ರಯಾಣಿಕರ ಸಂಚಾರ ಗಮನಿಸಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


