ಪ್ರಾಧಿಕಾರದ ಸಾಧನೆ ಪಟ್ಟಿ ನೀಡುವೆ: ಡಾ.ಎಲ್. ಹನುಮಂತಯ್ಯ
ನಾಡಿನ ಸಾಹಿತಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲಿ ಅವರ ವಿವರಗಳನ್ನು ಪರಿಶೀಲಿಸಿ ಸೂಕ್ತ ಮನವರಿಕೆ ಮಾಡಿಕೊಡಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್. ಹನುಮಂತಯ್ಯ...

ಬೆಂಗಳೂರು: ನಾಡಿನ ಸಾಹಿತಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲಿ ಅವರ ವಿವರಗಳನ್ನು ಪರಿಶೀಲಿಸಿ ಸೂಕ್ತ ಮನವರಿಕೆ ಮಾಡಿಕೊಡಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್. ಹನುಮಂತಯ್ಯ ತಿಳಿಸಿದ್ದಾರೆ.
ಪ್ರಾಧಿಕಾರವು ಕನ್ನಡ ಭಾಷೆ, ನಾಡು-ನುಡಿ ಮತ್ತು ಕನ್ನಡ ಅಭಿವೃದ್ಧಿಯ ಕಾರ್ಯಚಟುವಟಿಕೆಗಳ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬಂದಿದೆ. ಖಾಸಗಿ ಸಂಘಟನೆಯ ವ್ಯಕ್ತಿಯೊಬ್ಬರು ಯಾವುದೇ ಆಧಾರವಿಲ್ಲದೆ ವಿನಾಕಾರಣ ಕೇವಲ ಪ್ರಚಾರಕ್ಕಾಗಿ ನೀಡಿರುವ ವೈಯಕ್ತಿಕ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಪ್ಪಾಗಿ ಪ್ರಕಟಿಸಲಾಗಿದೆ.
ಯಾವುದೇ ಸಾಹಿತಿಯೂ ಪ್ರಾಧಿಕಾರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸದಿದ್ದರೂ ಸಹ ವಿವಾದಸ್ಪಾದವಾದ ಸುದ್ದಿ ಪ್ರಕಟಿಸಿರುವುದು ಪ್ರಾಧಿಕಾರದ ಕಾರ್ಯಕ್ಷಮತೆಯ ಬಗ್ಗೆ ತಪ್ಪು ಪರಿಕಲ್ಪನೆ ಮೂಡಿಸುವಂತಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


