ಕ್ರಿಕೆಟ್ ಆಟ ಕೊಲೆಯಲ್ಲಿ ಅಂತ್ಯ
ಕ್ರಿಕೆಟ್ ಆಡುವ ವೇಳೆ ಸ್ನೇಹಿತರ ನಡುವೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಳಿಮಾವು ಪ್ರದೇಶದ ವೈಶ್ಯಬ್ಯಾಂಕ್ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ...

ಬೆಂಗಳೂರು: ಕ್ರಿಕೆಟ್ ಆಡುವ ವೇಳೆ ಸ್ನೇಹಿತರ ನಡುವೆ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಳಿಮಾವು ಪ್ರದೇಶದ ವೈಶ್ಯಬ್ಯಾಂಕ್ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ.
ಕೋಣನಕುಂಟೆ ನಿವಾಸಿ ಶಿವಕೆಂಪೇಗೌಡ (20) ಕೊಲೆಯಾದವ. ಈತನ ಸ್ನೇಹಿತರೆ ಮಂಗಳವಾರ ರಾತ್ರಿ ಯುವಕನಿಗೆ ಮಾರಕಾಸ್ತ್ರಗಳಿಂದ ಇರಿದು ತಲೆ ಮೇಲೆ ಕಲ್ಲು ಎತ್ತು ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಮೂಲತಃ ಕನಕಪುರ ತಾಲೂಕಿನವರಾದ ಶಿವ, ಕಳೆದ 12 ವರ್ಷಗಳಿಂದ ಪೋಷಕರೊಂದಿಗೆ ಕೋಣನಕುಂಟೆಯಲ್ಲಿ ವಾಸವಿದ್ದರು. ವೆಲ್ಡಿಂಗ್ ಕೆಲಸ ಮಾಡುವ ಇವರು ಮಂಗಳವಾರ ರಾತ್ರಿ 10.30ರ ಸುಮಾರಿಗೆ ಹುಳಿಮಾವು ವೈಶ್ಯಬ್ಯಾಂಕ್ ಕಾಲೋನಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಇರಿದು, ತಲೆ ಮೇಲೆ ಕಲ್ಲು ಎತ್ತು ಹಾಕಿ ಕೊಲೆ ಮಾಡಿ ಪರಾರಿಯಾಗಿದೆ.
ಇದಕ್ಕೂ ಮೊದಲು ಈತನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುವ ವೇಳೆ ಮಾತಿನ ಚಕಮಕಿ ನಡೆದಿತ್ತು. ಆತನ ಮೇಲೆ ದ್ವೇಷ ಸಾಧಿಸಿದ ಸ್ನೇಹಿತರು ರಾತ್ರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮಾಹಿತಿ ಆಧಾರಿಸಿ ಈಗಾಗಲೇ ಆತನ ಕೆಲ ಸ್ನೇಹಿತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


