ರಾಜ್ಯ ಸರ್ಕಾರಕ್ಕೆ ಕೇಂದ್ರ ಪ್ರಶಸ್ತಿ
ವಿಕಲಚೇತನರಿಗೆ ಹಾಗೂ ಕುಷ್ಠ ರೋಗಿಗಳಿಗೆ ಆರೈಕೆ ಮತ್ತು ಉದ್ಯೋಗ ನೀಡಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ...

ನವದೆಹಲಿ: ವಿಕಲಚೇತನರಿಗೆ ಹಾಗೂ ಕುಷ್ಠ ರೋಗಿಗಳಿಗೆ ಆರೈಕೆ ಮತ್ತು ಉದ್ಯೋಗ ನೀಡಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.
ಗುರುವಾರ ಇಲಾಖೆ ಸಚಿವ ಯು.ಟಿ.ಖಾದರ್ ಕೇಂದ್ರ ಹಣಕಾಸು ಸಚಿವ ಅರುಣ್ ಜೆಟ್ಲಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ನಂತರ ಮಾತನಾಡಿದ ಸಚಿವ ಖಾದರ್, ಕರ್ನಾಟಕ ರಾಜ್ಯದಲ್ಲಿ ಕುಷ್ಠ ರೋಗಿಗಳಿಗೆ ಅತ್ಯುತ್ತಮ ಸೇವೆ, ವಿಕಲಚೇತನರಿಗೆ ಗಣನೀಯ ಸೇವೆ ಸಲ್ಲಿಸಲು ಎಲ್ಲ ನೆರವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿಕಲಚೇತನ , ಕುಷ್ಠ ರೋಗಿಗಳನ್ನು ಆರೈಕೆ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪಡೆದ ಈ ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಈ ರಾಜ್ಯದ ವಿಕಲಚೇತನರಿಗೆ , ಕುಷ್ಠ ರೋಗಿಗಳಿಗೆ ಸಮರ್ಪಿಸುವುದಾಗಿ ಸಚಿವರು ತಿಳಿಸಿದರು. ಪ್ರಶಸ್ತಿಯೊಂದಿಗೆ ನೀಡಿದ ರು.1 ಲಕ್ಷ ನಗದು ಬಹುಮಾನವನ್ನು ರೋಗವನ್ನು ನಿರ್ಮೂಲನೆಗೊಳಿಸಲು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


