ಜಿಲ್ಲಾ ಸುದ್ದಿ

ಪೋಲಿಯೋ ಲಸಿಕೆ ಹಾಕಿಸಿಕೊಂಡು ಬಂದ ಅವಳಿ ಮಕ್ಕಳ ಸಾವು: ದೂರು

ಬಿಬಿಎಂಪಿ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಿಕೊಂಡು ಬಂದ ಮರುದಿನ 4 ತಿಂಗಳ ಅವಳಿ ಮಕ್ಕಳು ಅನುಮಾನಾಸ್ಪದವಾಗಿ...

ಪೋಲಿಯೋ ಲಸಿಕೆ ಹಾಕಿಸಿಕೊಂಡು ಬಂದ ಅವಳಿ ಮಕ್ಕಳ ಸಾವು: ದೂರು
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಬಿಬಿಎಂಪಿ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಿಸಿಕೊಂಡು ಬಂದ ಮರುದಿನ 4 ತಿಂಗಳ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. 
ಗಿರಿನಗರ ನಿವಾಸಿ ಲುನೇಶ್, ಹೇಮಲತಾ ದಂಪತಿಯ ಸಾನ್ವಿ , ದಿಶಾ ಮೃತಪಟ್ಟ ಮಕ್ಕಳು. ಡಿ.3ರಂದು ಬಾಪೂಜಿ ನಗರದ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಲಸಿಕೆ ಹಾಕಿಸಿದ್ದರು. ಮರುದಿನ ಬೆಳಗ್ಗೆ ಹಾಲು ಕುಡಿದು ಮಲಗಿದ ಮಕ್ಕಳು ಎಚ್ಚರಗೊಂಡಿರಲಿಲ್ಲ. 
ಗಾಬರಿಗೊಂಡ ದಂಪತಿ, ಮಕ್ಕಳ ನ್ನು ಕ್ಲಿನಿಕ್‍ಗೆ ಕರೆದೊಯ್ದಿದ್ದರು. ಅದರೆ, ಅಷ್ಟು ಹೊತ್ತಿಗಾಗಲೇ ಮಕ್ಕಳು ಸಾವಿಗೀಡಾಗಿದ್ದವು. ಗಿರಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೋಲಿಯೋ ಲಸಿಕೆಯೇ ಸಾವಿಗೆ ಕಾರಣ ಎಂದು ದಂಪತಿ ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.