ಗುಂಡಿಗೆ ಜಾರಿ ಬಿದ್ದ ಬಾಲಕ ಸಾವು
ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಗುಂಡಿಗೆ ಬಿದ್ದು ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ...

ಬೆಂಗಳೂರು; ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಗುಂಡಿಗೆ ಬಿದ್ದು ನಾಲ್ಕು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಕಲಾಸಿಪಾಳ್ಯ ವಿನೋಬ ನಗರದಲ್ಲಿ ನೆಲೆಸಿರುವ ಕೂಲಿ ಕಾರ್ಮಿಕರಾದ ಸುರೇಶ್ ಹಾಗೂ ಲಕ್ಷ್ಮೀ ದಂಪತಿ ಪುತ್ರ ಮನೋಜ್ ಮೃತ ಬಾಲಕ. ವಿನೋಬ ನಗರದಲ್ಲಿರುವ ಬಿಬಿಎಂಪಿಯ ಸಿಎ ಸೈಟ್ ನಲ್ಲಿ ಆಟವಾಡಲು ಬಾಲಕ ಮನೋಜ್ ಬೆಳಗ್ಗೆ 11 ಗಂಟೆ ಸುಮಾರಿಗೆ ತೆರಳಿದ್ದ. ಆದರೆ, ಸಂಜೆ 4 ಗಂಟೆ ಸುಮಾರಿಗೆ ಬಿಬಿಎಂಪಿ ಜಾಗದಲ್ಲಿನ ಮೂರ್ನಾಲ್ಕು ಅಡಿ ಆಳದ ಹಾಳುಗುಂಡಿಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸಾಗಿಸಿದರು. ಆದರೆ, ಅಷ್ಟರಲ್ಲಿಯೇ ಮಗು ಅಸುನೀಗಿತ್ತು. ಈ ಘಟನೆಯಲ್ಲಿ ಬಿಬಿಎಂಪಿಯ ಲೋಪ ಕಂಡುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


