ಕಡಲೆಕಾಯಿ ಪರಿಷೆಗೆ ತಟ್ಟಿತು ಪರಿಷತ್ ಸಂಹಿತೆ ಬಿಸಿ
ಮೇಲ್ಮನೆ ಚುನಾವಣೆ ನೀತಿ ಸಂಹಿತೆಯ ಬಿಸಿ ಕಡಲೆಕಾಯಿ ಪರಿಷೆಗೂ ತಟ್ಟಿದೆ. ಕಾರ್ತಿಕ ಸೋಮವಾರ...

ಬೆಂಗಳೂರು: ಮೇಲ್ಮನೆ ಚುನಾವಣೆ ನೀತಿ ಸಂಹಿತೆಯ ಬಿಸಿ ಕಡಲೆಕಾಯಿ ಪರಿಷೆಗೂ ತಟ್ಟಿದೆ. ಕಾರ್ತಿಕ ಸೋಮವಾರ ಅಂಗವಾಗಿ ದೊಡ್ಡಗಣಪತಿ ದೇವಸ್ಥಾನದಲ್ಲಿ ಸೋಮವಾರ ಅಧಿಕೃತವಾಗಿ ಪ್ರಾರಂಭವಾಗಬೇಕಿದ್ದ ಕಡಲೆಕಾಯಿ ಪರಿಷೆ ಸ್ಥಗಿತಗೊಂಡಿದೆ. ದೊಡ್ಡಗಣಪತಿ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ, ಮೇಯರ್, ಕೇಂದ್ರ ಸಚಿವರು, ಸ್ಥಳೀಯ ನಗರ ಪಾಲಿಕಾ ಸದಸ್ಯರು ಕಡಲೆಕಾಯಿ ಪರಿಷೆ ಕಾರ್ಯಕ್ರಮ ಉದ್ಘಾಟಿಸಬೇಕಿತ್ತು.
ಆದರೆ ನೀತಿ ಸಂಹಿತೆ ಕಾರಣದಿಂದಾಗಿ ಸೋಮವಾರ ಯಾವುದೇ ಸರ್ಕಾರಿ ಪ್ರತಿನಿಧಿಗಳು ಭಾಗವಹಿಸುವಂತಿಲ್ಲ. ಉಳಿದಂತೆ ಪೂಜಾ ವಿಧಿ ವಿಧಾನಗಳು ನಡೆಯಲಿವೆ. ಭಾನುವಾರ ಬೆಳಗ್ಗೆ ಕ್ವಿಂಟಾಲ್ ಕಡಲೆಕಾಯಿಯ ಅಭಿಷೇಕ, ಬೆಣ್ಣೆ ಅಲಂಕಾರ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


