ಮದ್ಯ ಖರೀದಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಬಂಧಿಸಿರುವ ಯಲಹಂಕ ಉಪನಗರ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ...

ಬೆಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುರುವಾರ ಬಂಧಿಸಿರುವ ಯಲಹಂಕ ಉಪನಗರ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಯಲಹಂಕ ಉಪನಗರ ಎಸ್‍ಎಚ್‍ಐಜಿಎ 5ನೇ ಹಂತದ ನಿವಾಸಿ ರಾಜಾ (37) ಬಂಧಿತ ಆರೋಪಿ. ಸೃಷ್ಟಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಡಿ.6ರಂದು ಮಧ್ಯಾಹ್ನ 1.30ರ ಸುಮಾರಿನಲ್ಲಿ ಯಲಹಂಕ ಉಪನಗರದ ಮದರ್ ಡೈರಿ ವೃತ್ತದ ಬಳಿ ಇರುವ ನ್ಯೂ ಗೋಲ್ಡನ್ ಅಮೂಲ್ಯ ಎಂಆರ್‍ಪಿ ವೈನ್ ಶಾಪ್‍ನಲ್ಲಿ ಮದ್ಯ ಖರೀದಿಸಲು ಹೋಗಿದ್ದಾರೆ. ಈ ವೇಳೆ ಅದೇ ವೈನ್ ಶಾಪ್‍ನಲ್ಲಿ ಬಂಧಿತ ರಾಜಾ ಕೂಡ ಮದ್ಯ ಖರೀದಿಗೆ ಬಂದಿದ್ದ. ನಂತರ ವಿದ್ಯಾರ್ಥಿನಿ ಮದ್ಯ ಖರೀದಿಸಿ ಇಕ್ಕಟ್ಟಿನ ಜಾಗದಲ್ಲಿ ಹೊರಬರುವಾಗ ಆರೋಪಿಯು ಆಕೆಯ ದೇಹ ಸ್ಪರ್ಶಿಸಿದ್ದಾರೆ.
ಇದರಿಂದ ವಿದ್ಯಾರ್ಥಿನಿ ಆತನ ಕೊರಳ ಪಟ್ಟಿ ಹಿಡಿದು ಗಲಾಟೆ ಮಾಡಿದ್ದರು. ಈ ವೇಳೆ ರಾಜಾ ಆಕೆಯ ಕೈಹಿಡಿದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ವಿದ್ಯಾರ್ಥಿನಿಯು, ರಾಜಾ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ದ್ದರು. ಪೊಲೀಸರು, ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


