ಜಿಲ್ಲಾ ಸುದ್ದಿ

ಬೆಲೆ ಏರಿಕೆ ತಡೆಯಲು ಸರ್ಕಾರ ವಿಫಲ

ದೇಶದಲ್ಲಿ ದ್ವಿದಳ ಧ್ಯಾನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಹತೋಟಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರಗಳು ವಿಫಲವಾಗಿವೆ ಎಂದು ಸಂಯುಕ್ತ ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ರವಿಚಂದ್ರ ಆರೋಪಿಸಿದರು...

ಬೆಲೆ ಏರಿಕೆ ತಡೆಯಲು ಸರ್ಕಾರ ವಿಫಲ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ದೇಶದಲ್ಲಿ ದ್ವಿದಳ ಧ್ಯಾನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಹತೋಟಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರಗಳು ವಿಫಲವಾಗಿವೆ ಎಂದು ಸಂಯುಕ್ತ
ಜನತಾದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಕೆ.ರವಿಚಂದ್ರ ಆರೋಪಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೊಗರಿ ಹಾಗೂ ಹೆಸರು ಬೇಳೆ ಬೆಲೆ ದುಪ್ಪಟಾಗಿದೆ. ಕೇಂದ್ರ ನೀಡುವ ತೊಗರಿ ಬೇಳೆ ಸಬ್ಸಿಡಿಯನ್ನು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಸಮರ್ಥವಾಗಿ ಬಳಸಿಕೊಂಡು, ಜನರಿಗೆ ಕಡಿಮೆ ಬೆಲೆಗೆ ವಿತರಿಸಲಾಗುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಸಬ್ಸಿಡಿ ಪಡೆದು ಜನರಿಗೆ ಸೂಕ್ತ ಬೆಲೆಯಲ್ಲಿ ವಿತರಿಸಬೇಕು ಎಂದು ಒತ್ತಾಯಿಸಿದರು. ಉಪಾಧ್ಯಕ್ಷ ದೊಡ್ಡಣ್ಣಯ್ಯ, ಟಿಪ್ಪು ಸಂಯುಕ್ತ ರಂಗದ ಅಧ್ಯಕ್ಷ ಸರ್ದಾರ್ ಅಹ್ಮದ್ ಖುರೇಷಿ, ಅಹಿಂದ ಸೇನೆ ಅಧ್ಯಕ್ಷ ಮೇಡಳ್ಳಿ ನಾಗರಾಜ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.