ಮಂಡ್ಯ ಎಸಿ ಮೇಲೆ ಮರಳು ದಂಧೆಕೋರರಿಂದ ಹಲ್ಲೆ
ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ....

ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ.
ಪಾಂಡವಪುರ ತಾಲ್ಲೂಕಿನ ಚಿಕ್ಕಬ್ಯಾಡರಹಳ್ಳಿ ಬಳಿ ಉಪ ವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮೇಲೆ ಮರಳು ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿ, ಹಲವು ಲಾರಿಗಳನ್ನು ಜಪ್ತಿ ಮಾಡಲಾಗಿತ್ತು. ನಂತರ ಅಲ್ಲಿಂದ ಹೊರಟ ನಾಗಾರಾಜು ಅವರನ್ನು ಕಾರಿನಲ್ಲಿ ಹಾಗೂ ಬೈಕ್ ನಲ್ಲಿ ಹಿಂಬಾಲಿಸಿದ ಕೆಲ ಜನ ಕಿರಂಗೂರಿನ ಬಳಿ ಹಿಡಿದು ಎಳೆದಾಡಿದ್ದಾರೆ. ನಂತರ ಅವರನ್ನು ನಾಗರಾಜು ಅವರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಲಿಖಿತ ದೂರು ನೀಡಿದ ಹಿನ್ನೆಲೆಯಲ್ಲಿ ಇಂದು ದಾಳಿ ನಡೆಸಲಾಗಿತ್ತು. ಈ ಹಿಂದೆ ಪೊಲೀಸರ ಮೇಲೆ ಮರಳು ದಂಧೆ ಕೋರರು ಹಲ್ಲೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


