ಜಿಲ್ಲಾ ಸುದ್ದಿ

ಸಮರ್ಪಕ ವಿದ್ಯುತ್ ಪೂರೈಕೆಗೆ ಬದ್ಧ: ಡಿಕೆಶಿ

ರೈತರಿಗೆ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್ ಪೂರೈಸಲು ಕ್ರಮಕೈಗೊಳ್ಳುತ್ತೇನೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು...

ಸಮರ್ಪಕ ವಿದ್ಯುತ್ ಪೂರೈಕೆಗೆ ಬದ್ಧ: ಡಿಕೆಶಿ
ಇಂಧನ ಸಚಿವ ಡಿ.ಕೆ.ಶಿವಕುಮಾರ್ (ಸಂಗ್ರಹ ಚಿತ್ರ)
Published On :

ನೆಲಮಂಗಲ: ರೈತರಿಗೆ ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್ ಪೂರೈಸಲು ಕ್ರಮಕೈಗೊಳ್ಳುತ್ತೇನೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.

ಪಟ್ಟಣದ ಸಪ್ತಪದಿ ಸಮುದಾಯ ಭವನದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಸ್. ರವಿ ರವರಿಗೆ ತಾಲೂಕಿನ ಎಲ್ಲಾ 24 ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಪುರಸಭಾ ಸದಸ್ಯರು ಅತಿ ಹೆಚ್ಚು ಮತ ಹಾಕುವ ಮೂಲಕ ಅವರನ್ನು ಜಯಶೀಲರನ್ನಾಗಿಸಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಡ ಹಾಕಿ ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಎತ್ತಿನ ಹೊಳೆಗೆ ರು.12 ಸಾವಿರ ಕೋಟಿ ಅನುದಾನ ಬಿಡುಗಡೆಗೊಳಿಸಿರುವ ಸಂಸದ ಡಾ. ಎಂ. ವೀರಪ್ಪಮೊಯ್ಲಿ ಕಾರ್ಯ ಶ್ಲಾಘನೀಯ ಎಂದರು. ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಮಾತನಾಡಿ, ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಜನರ ಅಭಿವೃದ್ಧಿಗಾಗಿ ಪಂಚಾಯತ್‍ರಾಜ್ ಕಾಯ್ದೆಗೆ ತಿದ್ದುಪಡಿ ತಂದಿದೆ. ಕಾಂಗ್ರೆಸ್ ಪಕ್ಷ ಜನರಿಗೆ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಶ್ರಮಿಸುತ್ತಿದೆ ಎಂದು ಹೇಳಿದರು.

ಸಾರ್ವಜನಿಕ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಅಭಿವೃದ್ಧಿ ಕಾರ್ಯ ನಿರ್ವಹಿಸುತ್ತೇನೆ. ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ಮತ ನೀಡಿ ಜಯಗೊಳಿಸುವಂತೆ ಗ್ರಾಮಾಂತರ ಜಿಲ್ಲಾ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಎಸ್.ರವಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಪ್ಪ, ವಿಧಾನ ಪರಿಷತ್ ಸದಸ್ಯ ರೇವಣ್ಣ ಮಾಜಿ ಸಚಿವ ಅಂಜನಮೂರ್ತಿ, ನೆಯೋ.ಪ್ರಾ.ಅಧ್ಯಕ್ಷ ಸಿ.ಆರ್. ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಮು, ಮುಖಂಡರಾದ ರಂಗಧಾಮಯ್ಯ, ನೆ.ಲ. ಗಿರಿಧರ್ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.