ಜಿಲ್ಲಾ ಸುದ್ದಿ

ಕಾರಿಗೆ ಬಸ್ ಡಿಕ್ಕಿ: ದಸಂಸ ಮುಖಂಡ ಸಾವು

ದೇವಾಲಯಕ್ಕೆ ಹೋಗಿ ವಾಪಸ್ ಬರುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ಕನಕಪುರ ರಸ್ತೆಯ ಕಗ್ಗಲೀಪುರದ ಐಬಿಎ ಕಾಲೇಜು ಬಳಿ ಭಾನುವಾರ ನಡೆದಿದೆ...

ಕಾರಿಗೆ ಬಸ್ ಡಿಕ್ಕಿ: ದಸಂಸ ಮುಖಂಡ ಸಾವು
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ದೇವಾಲಯಕ್ಕೆ ಹೋಗಿ ವಾಪಸ್ ಬರುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ಕನಕಪುರ ರಸ್ತೆಯ ಕಗ್ಗಲೀಪುರದ ಐಬಿಎ ಕಾಲೇಜು ಬಳಿ ಭಾನುವಾರ ನಡೆದಿದೆ.

ದಲಿತ ಸಂಘರ್ಷ ಸಮಿತಿ ಮುಖಂಡ ಶಂಕರ್ (40) ಮೃತಪಟ್ಟವರು. ಕಾರಿನಲ್ಲಿದ್ದ ಸುನೀಲ್, ಹರೀಶ್, ವೆಂಕಟರಾಜು, ರೂಪಮ್ಮ, ಬಸ್ ಚಾಲಕ ಹಾಗೂ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ನಿಮಾ್ಹನ್ಸ್‍ನಲ್ಲಿ ಚಿಕಿತ್ಸೆ ನೀಡಲಾಗಿದೆ. ಹೊಸಕೋಟೆ ಬಳಿಯ ಗೋವಿಂದಪುರ ನಿವಾಸಿಯಾದ ಶಂಕರ್, ತಮ್ಮ ಸಹೋದರ ಸಂಬಂಧಿ ಕಲ್ಕಂಟೆಯ ವೆಂಕಟರಾಜು ಮತ್ತು ಅವರ ಪತ್ನಿ ರೂಪಮ್ಮ ಸೇರಿದಂತೆ ನಾಲ್ವರನ್ನು ಭಾನುವಾರ ಬೆಳಗಿನ ಜಾವ ಕನಕಪುರ ಸಮೀಪದ ಕಬ್ಬಾಳುವಿನಲ್ಲಿರುವ ಕಬ್ಬಾಳಮ್ಮನ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದರು.

ದೇವರ ದರ್ಶನ ಮುಗಿಸಿಕೊಂಡು ಕನಕಪುರ ರಸ್ತೆಯ ಕಗ್ಗಲೀಪುರದ ಐಬಿಎ ಕಾಲೇಜು ಬಳಿ ಬರುವಾಗ ಬೆಂಗಳೂರಿನಿಂದ ಕನಕಪುರ ಕಡೆಗೆ ಹೊರಟಿದ್ದ ಖಾಸಗಿ ಬಸ್, ಓವರ್‍ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಕಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಕಾರಿನ ಮೇಲೆ ಹರಿದಿದೆ. ಈ ವೇಳೆ ಕಾರು ಚಾಲಕ ಶಂಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಹಾಗೂ ಕಾರಿನಲ್ಲಿದ್ದ 9 ಜನರಿಗೆ ಗಾಯಗಳಾಗಿವೆ. ತಕ್ಷಣವೇ ಸ್ಥಳೀಯರು ಬಸ್‍ನಡಿ ಸಿಲುಕ್ಕಿದ್ದ ಎಲ್ಲರನ್ನೂ ಹೊರಗೆಳೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮೂವರನ್ನು ನಿಮ್ಹಾನ್ಸ್ ಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.