ಲ್ಯಾವೆಲ್ಲೆ ರಸ್ತೆಯಲ್ಲೇ ಕಸ ವಿಂಗಡಣೆ: ಪ್ರತಿಭಟನೆ
ನಗರದ ಲ್ಯಾವೆಲ್ಲೆ ರಸ್ತೆಯ ರೋಟರಿ ಕ್ಲಬ್ ವೃತ್ತದಲ್ಲಿ ಬಿಬಿಎಂಪಿ ಕಸ ವಿಂಗಡಣೆ ಮಾಡುತ್ತಿರುವುದನ್ನು ವಿರೋಧಿಸಿ ಸ್ಥಳೀಯ ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿದರು. ರೋಟರಿ ಕ್ಲಬ್ ವೃತ್ತದ ಸುತ್ತಮುತ್ತ ಕಸ ಸುರಿದು ವಿಂಗಡಿಸುತ್ತಿದ್ದಾರೆ...

ಬೆಂಗಳೂರು: ನಗರದ ಲ್ಯಾವೆಲ್ಲೆ ರಸ್ತೆಯ ರೋಟರಿ ಕ್ಲಬ್ ವೃತ್ತದಲ್ಲಿ ಬಿಬಿಎಂಪಿ ಕಸ ವಿಂಗಡಣೆ ಮಾಡುತ್ತಿರುವುದನ್ನು ವಿರೋಧಿಸಿ ಸ್ಥಳೀಯ ನಿವಾಸಿಗಳು ಭಾನುವಾರ ಪ್ರತಿಭಟನೆ ನಡೆಸಿದರು. ರೋಟರಿ ಕ್ಲಬ್ ವೃತ್ತದ ಸುತ್ತಮುತ್ತ ಕಸ ಸುರಿದು ವಿಂಗಡಿಸುತ್ತಿದ್ದಾರೆ.
ಇದರಿಂದ ಸಮೀಪದ ನಿವಾಸಿಗಳ ಆರೋ- ಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಲ್ಲದೆ, ಸಾರ್ವಜನಿಕರು ಹಾಗೂ ವಾಹನಸಂಚಾರಕ್ಕೆ ಅಡ್ಡಿಯಾಗುತ್ತಿದೆ. ನಗರದ ಹೊರವಲಯ ಅಥವಾ ಸಾರ್ವಜನಿಕರಿಗೆ ತೊಂದರೆಯಾಗದ ಸ್ಥಳದಲ್ಲಿ ಕಸ ವಿಂಗಡಣೆ ಮಾಡುವ ಬದಲು, ಈ ರೀತಿ ಜನರಿಗೆ ತೊಂದರೆ ಕೊಡುತ್ತಿರುವುದು ಖಂಡನೀಯ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡು, ರೋಟರಿ ಕ್ಲಬ್ ವೃತ್ತದಲ್ಲಿ ಕಸ ವಿಂಗಡಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


