ಜಿಲ್ಲಾ ಸುದ್ದಿ

ವಕೀಲರು-ಪೊಲೀಸ್ ಸಂಘರ್ಷ: ನೋಟಿಸ್

ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರು ಹಾಗೂ ಪೊಲೀಸರ ನಡುವೆ ನಡೆದಿದ್ದ ಸಂಘರ್ಷ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ...

ವಕೀಲರು-ಪೊಲೀಸ್ ಸಂಘರ್ಷ: ನೋಟಿಸ್
ಕರ್ನಾಟಕ ಹೈಕೋರ್ಟ್
Published On :

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರು ಹಾಗೂ ಪೊಲೀಸರ ನಡುವೆ ನಡೆದಿದ್ದ ಸಂಘರ್ಷ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ  ಪ್ರಾಸಿಕ್ಯೂಷನ್ ನಡೆಸಲು ಸಿಬಿಐಗೆ ಪೂರ್ವಾನುಮತಿ ನಿರಾಕರಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಆನಂದ ಬೈರಾರೆಡ್ಡಿ ಅವರಿದ್ದ ನ್ಯಾಯಪೀಠ ರಾಜ್ಯ ಸರ್ಕಾರ ಹಾಗೂ ಸಿಬಿಐ ಎಸ್‍ಪಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣವೇನು?: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರನ್ನು 2012ರ ಮಾರ್ಚ್ 2ರಂದು ಸಿಟಿ ಸಿವಿಲ್ ಕೋರ್ಟ್ ಸಂಕೀರ್ಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ವಕೀಲರು, ಪತ್ರಕರ್ತರು ಮತ್ತು ಪೊಲೀಸರ ನಡುವೆ ಸಂಘರ್ಷ ನಡೆದಿತ್ತು. ಈ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿಬಿಐ ವಿಶೇಷ ತನಿಖಾ ತಂಡ ರಚಿಸಿತ್ತು. ಸಿಬಿಐ ತನಿಖಾಧಿಕಾರಿಗಳು ತನಿಖೆ ಪೂರ್ಣಗೊಳಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಬಳಿಕ ಆರೋಪಿ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಸಿಬಿಐ ತನಿಖಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಪೂರ್ವಾನುಮತಿ ಕೋರಿದ್ದರು. ಆದರೆ, ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಭಾಯಿಸಿರುವುದರಿಂದ ಪ್ರಕರಣದಲ್ಲಿ ಅವರ ತಪ್ಪಿಲ್ಲ ಎಂದು ಸರ್ಕಾರ ಪ್ರಾಸಿಕ್ಯೂಷನ್‍ಗೆ ಪೂರ್ವಾನುಮತಿ ನೀಡಲು ನಿರಾಕರಿಸಿತ್ತು.

ಈ ಕ್ರಮ ಪ್ರಶ್ನಿಸಿರುವ ಬೆಂಗಳೂರು ವಕೀಲರ ಸಂಘ, ಪ್ರಕರಣದ ತನಿಖೆಗೆ ಖುದ್ದು ಸುಪ್ರೀಂ ಸಿಬಿಐ ವಿಶೇಷ ತನಿಖಾ ತಂಡ ರಚಿಸಿತ್ತು. ಅದರಂತೆ ಸಿಬಿಐ ತನಿಖೆ ಪೂರ್ಣಗೊಳಿಸಿ ಸಿಆರ್‍ಪಿಸಿ ಸೆಕ್ಷನ್ 232 ಮತ್ತು 162 ಪ್ರಕಾರ ಪ್ರಾಸಿಕ್ಯೂಷನ್‍ಗೆ ರಾಜ್ಯ ಸರ್ಕಾರದ ಪೂರ್ವಾನುಮತಿ ಅಗತ್ಯವಿಲ್ಲ. ಹೀಗಾಗಿ ಪೂರ್ವಾನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.