ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ...

ಮಂಡ್ಯ: ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳವಾರ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ನಡೆದಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದ್ದು, ರಾಮಕೃಷ್ಣ(63), ನಾಗಮ್ಮ(55) ಹಾಗೂ ಪುತ್ರ ಆನಂದ್(30) ಮೃತಪಟ್ಟ ದುರ್ದೈವಿಗಳು.
ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳೆದ ಕೆಲವು ದಿನಗಳಿಂದ ಉಂಟಾಗಿದ್ದ ಕುಟುಂಬ ಕಲಹದಿಂದ ಬೇಸತ್ತು ತಂದೆ, ತಾಯಿ ಹಾಗೂ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


