ತುಮಕೂರಿನಲ್ಲಿ ಅಕ್ರಮ ಗಣಿಗಾರಿಕೆ, ಒತ್ತುವರಿ ಆರೋಪ
ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಮಾತಾ ಮಿನರಲ್ಸ್ ಗಣಿ ಕಂಪನಿ ಪಾಲುದಾರ ಬಿಬಿಎಂಪಿ ಮಾಜಿ ಉಪ ಮೇಯರ್ ಪುಟ್ಟರಾಜು ಮನೆ ಮೇಲೆ ....

ತುಮಕೂರು: ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಮಾತಾ ಮಿನರಲ್ಸ್ ಗಣಿ ಕಂಪನಿ ಪಾಲುದಾರ ಬಿಬಿಎಂಪಿ ಮಾಜಿ ಉಪ ಮೇಯರ್ ಪುಟ್ಟರಾಜು ಮನೆ ಮೇಲೆ ಸೋಮವಾರ ವಿಶೇಷ ತನಿಖಾ ತಂಡ (ಎಸ್ ಐಟಿ) ದಾಳಿ ನಡೆಸಿ ಕೆಲ ದಾಖಲೆ, ಕಾಗದ ಪತ್ರಗಳನ್ನು ವಶಕ್ಕೆ ಪಡೆದಿದೆ.
ಮಾಜಿ ಸಚಿವ ವಿ.ಸೋಮಣ್ಣ ಅವರ ಪುತ್ರರ ಒಡೆತನದಲ್ಲಿರುವ ಮಾತಾ ಮಿನರಲ್ಸ್ ಗಣಿ ಕಂಪೆನಿ ತುಮಕೂರಿನಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಒತ್ತುವರಿ ಆರೋಪಕ್ಕೆ ಗುರಿಯಾಗಿದೆ. ಈ ಬಗ್ಗೆ ಲೋಕಾಯುಕ್ತ ತನಿಖಾ ತಂಡದ ಮುಖ್ಯಸ್ಥ ಯು.ವಿ.ಸಿಂಗ್ ನೀಡಿದ್ದ ವರದಿ ಆಧರಿಸಿ ಸಿಐಟಿ ತಂಡ ಪುಟ್ಟರಾಜು ಮನೆ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕು ಕೊಂಡ್ಲಿ ಸಮೀಪದ ಗಣಿ ಪ್ರದೇಶದಲ್ಲಿ ಮಾತಾ ಮಿನರಲ್ಸ್ 320 ಎಕರೆಯಲ್ಲಿ ಗಣಿಗಾರಿಕೆ ನಡೆಸಬೇಕಿತ್ತು. ಆದರೆ, ಕೊಂಡ್ಲಿಗೆ ಹೊಂದಿಕೊಂಡಿರುವ ಮೂಡಲಪಾಳ್ಯದ ಸರ್ವೇ ನಂಬರ್ 9ರ 206 ಎಕರೆಯಲ್ಲಿ ಗಣಿಗಾರಿಕೆ ನಡೆಸಿತ್ತು. ಲೋಕಾಯುಕ್ತ ತನಿಖಾ ತಂಡದ ಮುಖ್ಯಸ್ಥ ಯು.ವಿ.ಸಿಂಗ್ ನೀಡಿದ್ದ ವರದಿಯಲ್ಲಿ ಇದು ಕಾನೂನುಬಾಹಿರ ಎಂದು ವಿವರಿಸಲಾಗಿತ್ತು.
ಗಣಿ ಗುತ್ತಿಗೆ ನವೀಕರಣ ಪ್ರಕರಣ ಟ್ರಿಬ್ಯೂನಲ್‍ನಲ್ಲಿ ವಿಚಾರಣೆಗೆ ಬಾಕಿ ಇದ್ದಾಗಲೂ ಗಣಿ ಗುತ್ತಿಗೆ ನವೀಕರಣಕ್ಕೆ ಆಗಿನ ಸರ್ಕಾರ ಅನುಮತಿ ನೀಡಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಅಕ್ರಮ ಗಣಿಗಾರಿಕೆ ನಡೆಸಿರುವ ಗಣಿ ಪ್ರದೇಶದಿಂದ ಸುಮಾರು 10 ಲಕ್ಷ ಮೆಟ್ರಿಕ್ ಟನ್ ಕಬ್ಬಿಣ ಮತ್ತು ಮ್ಯಾಂಗನೀಸ್ ಅದಿರು ಸಾಗಿಸಿತ್ತು ಎಂಬ ಆರೋಪಕ್ಕೂ ಮಾತಾ ಮಿನರಲ್ಸ್ ಗಣಿ ಕಂಪನಿ ಗುರಿಯಾಗಿತ್ತು. ಮಾತಾ ಮಿನರಲ್ಸ್ ಗಣಿ ಕಂಪನಿ ನಡೆಸುತ್ತಿದ್ದರು. ಬಿಬಿಎಂಪಿ ಮಾಜಿ ಉಪಮೇಯರ್ ಪುಟ್ಟರಾಜು ಕೂಡ ಹಿಂದೆ ಈ ಕಂಪೆನಿ ಪಾಲುದಾರರಲ್ಲಿ ಒಬ್ಬರಾಗಿದ್ದರು. ಗುಬ್ಬಿ ತಾಲೂಕು ಕೊಂಡ್ಲಿ ಮತ್ತು ಮೂಡಲಪಾಳ್ಯ ಗ್ರಾಮಗಳ ವ್ಯಾಪ್ತಿಯಲ್ಲಿ 320 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಈ ಕಂಪನಿಗೆ ಗಣಿ ಗುತ್ತಿಗೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


