ಜಿಲ್ಲಾ ಸುದ್ದಿ

ಮೇಲ್ಮನೆ ಚುನಾವಣೆ: ಬಿಜೆಪಿ ಮಹತ್ವದ ಸಭೆ

ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಬಿಜೆಪಿ ಶಾಸಕರು ಮತ್ತು ಕಾರ್ಪೊರೇಟರ್ ಗಳ ಮಹತ್ವದ ಸಭೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಂಗಳವಾರ ನಡೆಯಿತು...

ಮೇಲ್ಮನೆ ಚುನಾವಣೆ: ಬಿಜೆಪಿ ಮಹತ್ವದ ಸಭೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಬಿಜೆಪಿ ಶಾಸಕರು ಮತ್ತು ಕಾರ್ಪೊರೇಟರ್ ಗಳ ಮಹತ್ವದ ಸಭೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಂಗಳವಾರ ನಡೆಯಿತು.

ಮಾಜಿ ಡಿಸಿಎಂ ಅಶೋಕ್ ಅವರ ಸಾರಥ್ಯದಲ್ಲಿ ನಡೆದ ಸಭೆಯಲ್ಲಿ ಚುನಾವಣೆ ಕಾರ್ಯತಂತ್ರದ ಬಗ್ಗೆ ಶಾಸಕರು, ಕಾಪ್ರೊರೇಟರ್ ಗಳು ಚರ್ಚೆ ನಡೆಸಿ ಅನಿಸಿಕೆಗಳನ್ನು ಹಂಚಿಕೊಂಡರು. ಸಭೆಯ ತರುವಾಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ದ ಆರ್.ಅಶೋಕ್, ಬೆಂಗಳೂರು ನಗರ ಸ್ಥಳೀಯ ಸಂಸ್ಥೆ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ವ್ಯಾಪ್ತಿಗೆ ಪಕ್ಷದ ಉಸ್ತುವಾರಿಗಳನ್ನು ನೇಮಕ ಮಾಡಿದ್ದೇವೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು ಎಂದರು.

ಬೆಂಗಳೂರು ನಗರ ಸ್ಥಳೀಯ ಕ್ಷೇತ್ರವನ್ನು ಬಿಜೆಪಿಯೇ ಗೆಲ್ಲಲಿದೆ ಎಂದ ಅವರು, ಈ ಕ್ಷೇತ್ರ ವ್ಯಾಪ್ತಿಯ ಎಲ್ಲ ಮತದಾರರನ್ನು ತಲುಪುವ ಕೆಲಸ ಮಾಡಲಾಗುತ್ತಿದೆ. ಎಲ್ಲರ ಮನವೊಲಿಸಿ ಹೆಚ್ಚಿನ ಮತಗಳಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ರಾಜ್ಯದಲ್ಲಿ ನಮ್ಮ ಪಕ್ಷವು 15ರಿಂದ 18 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಅಶೋಕ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.