ಯುಬಿಸಿಟಿ ಕಟ್ಟಡದಲ್ಲಿ ಅಗ್ನಿ ಅನಾಹುತ: ಆತಂಕ
ನಗರದ ಹೈಫೈ ಹಾಟ್ ಸ್ಪಾಟ್ ಯುಬಿ ಸಿಟಿಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಯುಬಿ ಸಿಟಿ ಕಟ್ಟಡದ 2ನೇ ಮಹಡಿಯಲ್ಲಿರುವ ಲೂಯಿಸ್ ವಿಟರ್ ಎಂಬ ಪಿಂಗಾಣಿ ಶೋ ರೂಂನಲ್ಲಿ ಶಾರ್ಟ್ ಸಕ್ರ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಕಂಡ ಕೂಡಲೇ ಜನ ಜಮಾಯಿಸಿದ್ದರು...

ಬೆಂಗಳೂರು: ನಗರದ ಹೈಫೈ ಹಾಟ್ ಸ್ಪಾಟ್ ಯುಬಿ ಸಿಟಿಯಲ್ಲಿ ಮಂಗಳವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಯುಬಿ ಸಿಟಿ ಕಟ್ಟಡದ 2ನೇ ಮಹಡಿಯಲ್ಲಿರುವ ಲೂಯಿಸ್ ವಿಟರ್ ಎಂಬ ಪಿಂಗಾಣಿ ಶೋ ರೂಂನಲ್ಲಿ ಶಾರ್ಟ್ ಸಕ್ರ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಕಂಡ ಕೂಡಲೇ ಜನ ಜಮಾಯಿಸಿದ್ದರು.
ಆತಂಕಗೊಂಡ ಸ್ಥಳೀಯರು ಅಗ್ನಿಶಾಮಕ ಇಲಾಖೆಗೆ ಕರೆ ಮಾಡಿದ್ದಾರೆ. ನಂತರ ಅಶೋಕನಗರದಿಂದ ಸ್ಥಳಕ್ಕೆ ಬಂದ ಮೂರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಆದರೂ ಕೆಲ ಗಂಟೆಗಳ ಕಾಲ ಜನ ಕಟ್ಟಡದೊಳಗೆ ಹೋಗಲು ಭಯಪಡುತ್ತಿದ್ದರು. ಹೆಚ್ಚಾಗಿ ಯಾವುದೇ ವಸ್ತುಗಳು ಬೆಂಕಿಗಾಹುತಿ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


