ಬಾಗಿಲು ಮುರಿದು ರು.2 ಲಕ್ಷ ಹಣ ಕಳವು
ಹಗಲು ಹೊತ್ತಿನಲ್ಲೇ ಬಾಗಿಲು ಬೀಗ ಮುರಿದು ಮನೆ ಒಳಗೆ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ರು.2 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ಹನುಮಂತನಗರದಲ್ಲಿ ನಡೆದಿದೆ...

ಬೆಂಗಳೂರು: ಹಗಲು ಹೊತ್ತಿನಲ್ಲೇ ಬಾಗಿಲು ಬೀಗ ಮುರಿದು ಮನೆ ಒಳಗೆ ನುಗ್ಗಿರುವ ಕಳ್ಳರು ಬೀರುವಿನಲ್ಲಿದ್ದ ರು.2 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ಹನುಮಂತನಗರದಲ್ಲಿ ನಡೆದಿದೆ.
ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಹನುಮಂತನಗರ 12ನೇ ಕ್ರಾಸ್ ನಿವಾಸಿ ವಿಶ್ವನಾಥ್ ಅವರು ಮಂಗಳವಾರ ಮಧ್ಯಾಹ್ನ 12.30ರ ಸುಮಾರಿನಲ್ಲಿ ಮನೆ ಬಾಗಿಲಿಗೆ ಬೀಗ ಹಾಕಿಕೊಂಡು ಕಾರ್ಯ ನಿಮಿತ್ತ ಪತ್ನಿ ರಮಣಿ ಅವರೊಂದಿಗೆ ಬಸವನಗುಡಿಗೆ ತೆರಳಿದ್ದರು. ಈ ವೇಳೆ ಆಯುಧದಿಂದ ಬಾಗಿಲು ಬೀಗ ಮುರಿದು ಮನೆ ಒಳಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿದ್ದ ನಗದು ದೋಚಿ ಪರಾರಿಯಾಗಿದ್ದರು. ದಂಪತಿ ಕೆಲಸ ಮುಗಿಸಿಕೊಂಡು ಸಂಜೆ 4.30ರ ಸುಮಾರಿಗೆ ಮನೆಗೆ ಹಿಂದಿರುಗಿದಾಗ ಕಳ್ಳತನ ಘಟನೆಗೊತ್ತಾಗಿದೆ. ತಕ್ಷಣ ವಿಶ್ವನಾಥ್, ಹನಮಂತನಗರ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಲ್‍ಸಿಡಿ ಟಿವಿ ಕಳವು: ಮನೆ ಬಾಗಿಲು ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಎಲ್‍ಸಿಡಿ ಟಿವಿ ಕದ್ದು ಪರಾರಿಯಾಗಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊಹಮ್ಮದ್ ಮೌಸಿನ್ ಅವರು ನಾಗರಬಾವಿ 2ನೇ ಹಂತದ 7ನೇ ಬ್ಲಾಕ್ 3 ಕ್ರಾಸ್‍ನಲ್ಲಿ ಕಟ್ಟಿಸಿರುವ ಮನೆಗೆ ಇತ್ತೀಚೆಗಷ್ಟೇ ಗೃಹಪ್ರವೇಶ ನೆರವೇರಿಸಿದ್ದರು. ಕೆಲ ದಿನಗಳ ಹಿಂದೆ ಕೆಲಸ ನಿಮಿತ್ತ ಮನೆಗೆ ಬೀಗ ಹಾಕಿಕೊಂಡು ದುಬೈಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಕಳ್ಳರು ಬಾಗಿಲು ಬೀಗ ಮುರಿದು ಮನೆ ಒಳಗೆ ನುಗ್ಗಿ ಎಲ್‍ಸಿಡಿ ಟಿವಿ ಕದ್ದು
ಪರಾರಿಯಾಗಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


