ಅನುಮಾನಾಸ್ಪದ ಸಾವನ್ನಪ್ಪಿದ ಕ್ಯಾಬ್ ಚಾಲಕ
ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ...

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ತುಮಕೂರು ಮೂಲದ ನವೀನ್ ಕುಮಾರ್ (29) ಮೃತ ಯುವಕ. ನಗರದ ಎಚ್‍ಎಎಲ್‍ನ ರಮೇಶ್ ನಗರದ ವಾಸಿ ನವೀನ್ ಕುಮಾರ್ ಮಂಗಳವಾರ ತಡ ರಾತ್ರಿ 11.30ರ ವೇಳೆಯಲ್ಲಿ ಮಾರತ್‍ಹಳ್ಳಿ ಸೇತುವೆ ಬಳಿ ಕ್ಯಾಬ್‍ನಲ್ಲಿ ಬರುವಾಗ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಬಿದ್ದಿದ್ದಾರೆ.
ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆದರೆ, ನವೀನ್ ಮೈಮೇಲೆ ಚೂರಿ ಇರಿತದ ಗುರುತುಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಇದು ಕೊಲೆ ಅಥವಾ ಆತ್ಮಹತ್ಯೆಯೇ ಎಂಬ ಅನುಮಾನವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


