ಜಿಲ್ಲಾ ಸುದ್ದಿ

ಬಿಎಸ್ ವೈ ತೀರ್ಪು ಕಾಯ್ದಿಟ್ಟ ಕೋರ್ಟ್

ಅಕ್ರಮ ಡಿ-ನೋಟಿಫಿಕೇಷನ್ ಪ್ರಕರಣಗಳ ಸಂಬಂಧ ಮಹಾ ಲೇಖಪಾಲ (ಸಿಎಜಿ) ವರದಿ ಆಧರಿಸಿ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಪ್ರಥಮತನಿಖಾ ವರದಿಗಳನ್ನು (ಎಫ್ಐಆರ್) ರದ್ದುಪಡಿಸುವಂತೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...

ಬಿಎಸ್ ವೈ ತೀರ್ಪು ಕಾಯ್ದಿಟ್ಟ ಕೋರ್ಟ್
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Published On :

ಬೆಂಗಳೂರು: ಅಕ್ರಮ ಡಿ-ನೋಟಿಫಿಕೇಷನ್ ಪ್ರಕರಣಗಳ ಸಂಬಂಧ ಮಹಾ ಲೇಖಪಾಲ (ಸಿಎಜಿ) ವರದಿ ಆಧರಿಸಿ ಲೋಕಾಯುಕ್ತ ಪೊಲೀಸರು ತಮ್ಮ ವಿರುದ್ಧ ದಾಖಲಿಸಿದ್ದ ಪ್ರಥಮ
ತನಿಖಾ ವರದಿಗಳನ್ನು (ಎಫ್ಐಆರ್) ರದ್ದುಪಡಿಸುವಂತೆ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಎಫ್ ಐಆರ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ರತ್ನಕಲಾ ಅವರಿದ್ದ ಪೀಠ ತೀರ್ಪು ಕಾಯ್ದಿರಿಸಿದೆ. ಸಿಎಜಿ ವರದಿ ಆಧರಿಸಿ ಲೋಕಾಯುಕ್ತ
ಪೊಲೀಸರು ಯಡಿಯೂರಪ್ಪ ವಿರುದ್ಧ 15 ಎಫ್ಐಆರ್ ದಾಖಲಿಸಿದ್ದರು. ಈ ಹಿಂದೆ ಮೂರು ಎಫ್ಐಆರ್‍ಗಳ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದರು. ಹೈಕೋರ್ಟ್ ಆ ಮೂರು ಎಫ್ಐಆರ್‍ಗಳಿಗೆ ಮಧ್ಯಂತರ ತಡೆ ನೀಡಿದೆ. ಇದೀಗ 12 ಎಫ್ಐಆರ್ ರದ್ದು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.