ರು.8 ಲಕ್ಷ ಮೌಲ್ಯದ ಚಿನ್ನಾಭರಣ ವಶ
ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ರು.8 ಲಕ್ಷ ಮೌಲ್ಯದ 258 ಗ್ರಾಂ ಚಿನ್ನಾಭರಣ ಹಾಗೂ 750 ಗ್ರಾಂ ತೂಕದ ಬೆಳ್ಳಿ ಕತ್ತಿ ವಶಪಡಿಸಿಕೊಂಡಿದ್ದಾರೆ...

ಬೆಂಗಳೂರು: ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿರುವ ರಾಜರಾಜೇಶ್ವರಿನಗರ ಠಾಣೆ ಪೊಲೀಸರು ರು.8 ಲಕ್ಷ ಮೌಲ್ಯದ 258 ಗ್ರಾಂ ಚಿನ್ನಾಭರಣ ಹಾಗೂ 750 ಗ್ರಾಂ ತೂಕದ ಬೆಳ್ಳಿ ಕತ್ತಿ ವಶಪಡಿಸಿಕೊಂಡಿದ್ದಾರೆ.
ಕುಂಬಳಗೂಡು ಪೆಪ್ಸಿ ಶೆಡ್ ನಿವಾಸಿ ನವಾಜ್(32) ಮತ್ತು ಭದ್ರಾವತಿ ಟೌನ್ ಬೋವಿ ಕಾಲೋನಿ ನಿವಾಸಿ ಶಿವು (26) ಬಂಧಿತರು. ಇವರ ಬಂಧನದಿಂದ ನಗರದ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಗಳವು ಮತ್ತು ಮನೆ ಕನ್ನ ಸಂಬಂಧ 8 ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ವಿವಿಧ ಮಾದರಿಯ ರು.8 ಲಕ್ಷ ಮËಲ್ಯದ 258 ಗ್ರಾಂ ಚಿನ್ನಾಭರಣ ಹಾಗೂ 750 ಗ್ರಾಂ ತೂಕದ ಬೆಳ್ಳಿ ಕತ್ತಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವೃತ್ತಿಪರ ಕಳ್ಳರಾಗಿರುವ ಆರೋಪಿಗಳು ಹಗಲು ರಾತ್ರಿ ಲೆಕ್ಕಿಸದೆ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದರು. ಈ ಹಿಂದೆ ಕಳವು ಪ್ರಕರಣಗಳಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಆರೋಪಿಗಳು ಜಾಮೀನು ಮೇಲೆ ಹೊರಗೆ ಬಂದಿದ್ದರು. ಆದರೂ ತಮ್ಮ ಚಾಳಿ ಮುಂದುವರಿಸಿ ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಆರೋಪಿಗಳ ಬಂಧನದಿಂದ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ 2 ಪ್ರಕರಣ, ಬ್ಯಾಟರಾಯನಪುರ 1 ಮತ್ತು ರಾಜರಾಜೇಶ್ವರಿನಗರ 5 ಪ್ರಕರಣ ಸೇರಿದಂತೆ ಒಟ್ಟು 8 ಪ್ರಕರಣಗಳು ಪತ್ತೆಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


