ಜಿಲ್ಲಾ ಸುದ್ದಿ

ಬೆಂಗಳೂರಿನಲ್ಲಿ ಸರಣಿ ಅಪಘಾತ, ಸರ್ಕಾರಿ ಬಸ್ ಕಂಡಕ್ಟರ್ ದುರ್ಮರಣ

ನಗರದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಗೂಡ್ಸ್ ಲಾರಿಯೊಂದು ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸರ್ಕಾರಿ ಬಸ್ ಕಂಡೆಕ್ಟರ್...

ಬೆಂಗಳೂರಿನಲ್ಲಿ ಸರಣಿ ಅಪಘಾತ, ಸರ್ಕಾರಿ ಬಸ್ ಕಂಡಕ್ಟರ್ ದುರ್ಮರಣ
ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿರುವ ಬಸ್ ಕಂಡೆಕ್ಟರ್
Published On :
ಬೆಂಗಳೂರು: ನಗರದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಗೂಡ್ಸ್ ಲಾರಿಯೊಂದು ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ, ಸರ್ಕಾರಿ ಬಸ್ ಕಂಡೆಕ್ಟರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. 
ಮೈಸೂರು ರಸ್ತೆ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಕೆಎಸ್ ಆರ್ ಟಿಸಿ ಬಸ್ ಗೆ ಗೂಡ್ಸ್ ಲಾರಿ, ಟಾಟಾ ಸುಮೋ, ಮತ್ತು ಕಾರು ಡಿಕ್ಕಿ ಹೊಡೆದಿದೆ. 
ಘಟನೆಯಲ್ಲಿ ಬಸ್ ನಿರ್ವಾಹಕ ರವೀಚಂದ್ರ (35) ಮೃತಪಟ್ಟಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗೂಡ್ಸ್ ಲಾರಿ ಬ್ರೇಕ್ ಫೇಲ್ ಆಗಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 
ಆದರೆ, ಅಪಘಾತದ ಬಳಿಕ ಪರಾರಿಯಾಗಲು ಚಾಲಕ ಯತ್ನಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.