ಪದಚ್ಯುತಿ ವಿರುದ್ಧ ರಿಟ್, ಸುಭಾಷ್ ಬಿ.ಅಡಿ ಕಾರ್ಯನಿರ್ವಹಿಸಬಹುದು: ಹೈಕೋರ್ಟ್
ನ್ಯಾಯಮೂರ್ತಿ ಸುಭಾಷ್.ಬಿ ಅಡಿ ರಾಜ್ಯ ಹೈಕೋರ್ಟ್‌ಗೆ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಜನವರಿ 2ನೇ ವಾರಕ್ಕೆ ವಿಚಾರಣೆ ಮುಂದೂಡಿದೆ. ..

ಬೆಂಗಳೂರು: ರಾಜ್ಯ ಸರಕಾರ ಕೈಗೊಂಡಿದ್ದ ಪದಚ್ಯುತಿ ನಿರ್ಣಯವನ್ನು ಪ್ರಶ್ನಿಸಿ ಉಪಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್.ಬಿ ಅಡಿ ರಾಜ್ಯ ಹೈಕೋರ್ಟ್‌ಗೆ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಜನವರಿ 2ನೇ ವಾರಕ್ಕೆ ವಿಚಾರಣೆ ಮುಂದೂಡಿದೆ.
ತಮ್ಮ ವಿರುದ್ಧದ ಪದಚ್ಯುತಿ ನಿರ್ಣಯವನ್ನು ಪ್ರಶ್ನಿಸಿ, ನ್ಯಾಯಮೂರ್ತಿ ಸುಭಾಷ್.ಬಿ ಅಡಿ ರಾಜ್ಯ ಹೈಕೋರ್ಟ್‌ಗೆ ಗುರುವಾರ ರಿಟ್ ಅರ್ಜಿ ಸಲ್ಲಿಸಿದ್ದರು.ಇದರೊಂದಿಗೆ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರು ರಾಜ್ಯ ಸರಕಾರದ ವಿರುದ್ಧ ಕಾನೂನು ಸಮರ ಸಾರಿದ್ದರು.
ನ್ಯಾ. ಸುಭಾಷ್.ಬಿ ಅಡಿಪರ ಬಿ.ವಿ ಆಚಾರ್ಯ ವಾದ ಮಂಡಿಸುತ್ತಿದರು. ಈ ವೇಳೆ ಸ್ಪೀಕರ್ ಕಚೇರಿ ಹೊರಡಿಸಿರುವ ಪತ್ರ ವಾಪಸ್ ಪಡೆಯಲು ಸಾಧ್ಯವಿದೆಯೇ ಎಂದು ಎಜೆ ಎಂ.ಆರ್ ನಾಯ್ಕ ಅವರಿಗೆ ಜಡ್ಜ್ ಬೈರಾ ರೆಡ್ಡಿ ಪ್ರಶ್ನಿಸಿದ್ದಾರೆ. ಸ್ಪೀಕರ್ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಿಕೊಂಡ ಜಡ್ಜ್ ಮುಂದಿನ ವಿಚಾರಣೆವರೆಗೆ ಸುಭಾಷ್ ಆಡಿ ಕಾರ್ಯ ನಿರ್ವಹಿಸಬಹುದೆಂದು ಹೇಳಿರುವ ಕೋರ್ಟ್ ಜನವರಿ 2ನೇ ವಾರಕ್ಕೆ ಮುಂದಿನ ವಿಚಾರಣೆಯನ್ನು ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


