ಬಸ್- ಕ್ರೂಸರ್ ಡಿಕ್ಕಿ, ನಾಲ್ವರ ಸಾವು, ಐವರಿಗೆ ಗಾಯ
ಕೆಎಸ್ಆರ್ಟಿಸಿ ಬಸ್ ಮತ್ತು ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ...

ವಿಜಯಪುರ: ಕೆಎಸ್ಆರ್ಟಿಸಿ ಬಸ್ ಮತ್ತು ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ 6.30ರ ಸುಮಾರಿಗೆ ಘಟನೆ ಸಂಭವಿಸಿದ್ದು, ಮೃತಪಟ್ಟವರಲ್ಲಿ ಓರ್ವ ಮಹಿಳೆ, ಉಳಿದವರು ಪುರುಷರಾಗಿದ್ದಾರೆ. ಕ್ರೂಸರ್ನಲ್ಲಿರುವವರೇ ಸಾವನ್ನಪ್ಪಿದ್ದಾರೆ. ವಿಜಯಪುರದಿಂದ ಹುಬ್ಬಳ್ಳಿಯ ಕಡೆಗೆ ಹೋಗುತ್ತಿತ್ತು. ಬಸ್ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಬರುತ್ತಿತ್ತು ಎಂದು ಹೇಳಲಾಗಿದೆ.
ವಿಜಯಾಪುರದ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


