ಪ್ರೇಮ ವೈಫಲ್ಯ: ವಿದ್ಯಾರ್ಥಿನಿ ಆತ್ಮಹತ್ಯೆ
ಎಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ತಿಲಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಶುಕ್ರವಾರ ತಿಲಕ್‍ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತಿಲಕ್‍ನಗರದ ಪುಷ್ಪಾ ಎಂಬವರ ಪುತ್ರಿ ಶ್ವೇತಾ (21) ಆತ್ಮಹತ್ಯೆಗೆ ಶರಣಾದವರು. ಇವರು ನಗರದ ಟಿ.ಜಾನ್ ಕಾಲೇಜಿನಲ್ಲಿ ಮೂರನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ತಾಯಿ ಪುಷ್ಪಾ ಜೊತೆ ವಾಸವಾಗಿದ್ದರು. ಬ್ಯೂಟಿಷಿಯನ್ ಆಗಿರುವ ಪುಷ್ಪಾ ಎಂದಿನಂತೆ ಶುಕ್ರವಾರ ಬೆಳಗ್ಗೆ ಕೆಲಸಕ್ಕೆ ತೆರಳಿದ್ದರು. ಆ ವೇಳೆ ಶ್ವೇತಾ ಮನೆಯಲ್ಲಿದ್ದರು. ಕೆಲಸ ಮುಗಿಸಿ ಸಂಜೆ 7ಗಂಟೆ ಸುಮಾರಿಗೆ ಪುಷ್ಪಾ ಮನೆಗೆ ವಾಪಸಾದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತಿಲಕ್ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆ ವೇಳೆ ಮನೆಯಲ್ಲಿ ಡೆತ್ ನೋಟ್ ಸಿಕ್ಕಿದೆ. ಮೇಲ್ನೋಟಕ್ಕೆ ಶ್ವೇತಾ ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


