ಕರುಳ ಕುಡಿಯೊಂದಿಗೆ ಟಿಪ್ಪು ಡ್ರಾಪ್ ನಿಂದ ಹಾರಿ ಗೃಹಿಣಿ ಆತ್ಮಹತ್ಯೆ
ಗೃಹಿಣಿಯೊಬ್ಬಳು ಎರಡು ವರ್ಷದ ಮಗುವಿನೊಂದಿಗೆ ನಂದಿ ಬೆಟ್ಟದ ಟಿಪ್ಪು ಡ್ರಾಪ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ...

Published On :
ಚಿಕ್ಕಬಳ್ಳಾಪುರ: ಗೃಹಿಣಿಯೊಬ್ಬಳು ಎರಡು ವರ್ಷದ ಮಗುವಿನೊಂದಿಗೆ ನಂದಿ ಬೆಟ್ಟದ ಟಿಪ್ಪು ಡ್ರಾಪ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ.
ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರತ್ಯುಷಾ(24) ಮತ್ತು ಸಾತ್ವಿಕ್(2) ಮೃತಪಟ್ಟವರು. ಮೂರು ವರ್ಷದ ಹಿಂದೆ ಗೌರಿಬಿದನೂರಿನ ನಿವಾಸಿ ಸುಮನ್ ಎಂಬುವವರೊಂದಿಗೆ ವಿವಾಹವಾಗಿತ್ತು.
ಕಣಿವೆಯಲ್ಲಿ ಹುಡಕಾಟ ನಡೆಸಿದ ಪೊಲೀಸರು ಮಹಿಳೆಯ ಶವ ಪತ್ತೆ ಹಚ್ಚಿದ್ದಾರೆ. ಮಗುವಿನ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


