ದ್ವಿಚಕ್ರ ವಾಹನ ಕಳ್ಳರ ಬಂಧನ
ನಕಲಿ ಕೀ ಬಳಸಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಹಚರ ಬಾಲಾರೋಪಿಯೊಬ್ಬನನ್ನು ಜಯನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ...

ಬೆಂಗಳೂರು: ನಕಲಿ ಕೀ ಬಳಸಿ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಆರೋಪಿ ಹಾಗೂ ಆತನ ಸಹಚರ ಬಾಲಾರೋಪಿಯೊಬ್ಬನನ್ನು ಜಯನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬಂಧಿತರಿಂದ ರು.5 ಲಕ್ಷ ಮೌಲ್ಯದ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ತಲಘಟ್ಟಪುರದ ಭೋವಿ ಕಾಲೋನಿ ನಿವಾಸಿ ಕಿರಣ್ ಗುಜಾರ್ (20) ಮತ್ತು ಆತನ ಸಹಚರ ನಕಲಿ ಕೀ ಬಳಸಿ ನಗರದ ವಿವಿಧೆಡೆ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 11 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಜೂಜು ಅಡ್ಡೆ ಮೇಲೆ ದಾಳಿ:` ಜೂಜು ಅಡ್ಡೆ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಐವರು ಆರೊಪಿಗಳನ್ನು ಬಂಧಿಸಿ, ಅವರಿಂದ ರು.55,700
ನಗದು ಹಾಗೂ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ರಾಮು(30), ಲಿಂಗೇಗೌಡ(32), ಮರಿಸ್ವಾಮಿಗೌಡ(29), ಮಹದೇವ(29) ಹಾಗೂ ವಸಂತ್‍ಕುಮಾರ್(28) ಬಂಧಿತರು.
ಉತ್ತರಹಳ್ಳಿ ಸಮೀಪದ ದೊಡ್ಡಗೌಡನಪಾಳ್ಯದ ಕಟ್ಟಡ ಕಟ್ಟಡವೊಂದರಲ್ಲಿ ಇಸ್ಪೀಟ್ ಆಟ ನಡೆಯುತ್ತಿತ್ತು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ದಾಳಿ ನಡೆಸಿ ಪೊಲೀಸರು ಆರೋಪಿಗಳನ್ನು ನಾಲ್ವರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


