ಬ್ಯಾಂಕ್‍ಗಳಲ್ಲಿ ಸುರಕ್ಷತಾ ಕ್ರಮ ಕಡ್ಡಾಯ
ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಗಮನ ಬೇರೆಡೆ ಸೆಳೆದು ಹಣ ದೋಚುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಬ್ಯಾಂಕ್ ಗಳು, ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದಾಗಬೇಕೆಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್...

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದುಷ್ಕರ್ಮಿಗಳು ಗಮನ ಬೇರೆಡೆ ಸೆಳೆದು ಹಣ ದೋಚುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಬ್ಯಾಂಕ್ ಗಳು, ಹಣಕಾಸು ಸಂಸ್ಥೆಗಳು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದಾಗಬೇಕೆಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಹರಿಶೇಖರನ್ ಹೇಳಿದರು.
ಕೋರಮಂಗಲದ ಸೇಂಟ್ ಜಾನ್ಸ್ ಆಸ್ಪತ್ರೆ ಸಭಾಂಗಣದಲ್ಲಿ ಶನಿವಾರ ಬ್ಯಾಂಕ್‍ಗಳ ವ್ಯವಸ್ಥಾಪಕರು ಮತ್ತು ಸೆಕ್ಯುರಿಟಿ ಏಜೆನ್ಸಿ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್‍ಗಳು, ಹಣಕಾಸು ಸಂಸ್ಥೆಗಳಲ್ಲಿ ನಡೆಯುವ ದರೋಡೆ ಪ್ರಕರಣಗಳಲ್ಲಿ ಕೆಲ ಬ್ಯಾಂಕ್ ಸಿಬ್ಬಂದಿಯೂ ಶಾಮೀಲಾಗುತ್ತಿದ್ದಾರೆ. ಆದ್ದರಿಂದ ಸಿಬ್ಬಂದಿಗಳ ನೇಮಕ ಸಂದರ್ಭದಲ್ಲಿ ಬಹಳ ಎಚ್ಚರಿಕೆ ವಹಿಸಬೇಕೆಂದು ಅವರು ತಿಳಿಸಿದರು.
ನಗರದ ಆಗ್ನೇಯ ವಿಭಾಗದ ಬಹಳಷ್ಟು ಬ್ಯಾಂಕ್‍ಗಳು ಇಂದಿಗೂ ಸಿಸಿಟಿವಿ ಕ್ಯಾಮೆರಾ ಅಳವಡಿಕೆಗೆ ಮುಂದಾಗಿಲ್ಲ. ಕೂಡಲೇ ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಬ್ಯಾಂಕ್ ಆವರಣ ದಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಅಂತಹ ವ್ಯಕ್ತಿಗಳ ಬಗ್ಗೆ ಸದಾ ಕಾಲ ನಿಗಾವಹಿಸಬೇಕೆಂದು ಸಲಹೆ ನೀಡಿದರು.
ಆಗ್ನೇಯ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಮಾತನಾಡಿ, ಜನ ನಂಬಿಕೆಯಿಂದ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಲ್ಲಿ ತಮ್ಮ ಹಣ ಇಡಲು ಮುಂದೆ ಬರುತ್ತಿದ್ದಾರೆ. ಸಂಸ್ಥೆಗಳು ಈ ನಂಬಿಕೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಬೇಕು. ತಮ್ಮ ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.
ಎಟಿಎಂ ಕೇಂದ್ರಗಳಲ್ಲಿ ವೃದ್ಧ ಭದ್ರತಾ ಸಿಬ್ಬಂದಿ ನೇಮಿಸಬಾರದು ರಾತ್ರಿ ಪಾಳಿಯಲ್ಲಿ ಭದ್ರತೆಯನ್ನು ಹೆಚ್ಚಿಸಬೇಕು. ಮುಖ್ಯವಾಗಿ ಭದ್ರತಾ ಸಿಬ್ಬಂದಿ ನೇಮಕಾತಿ ವೇಳೆ ಅವರ ಹಿಂದಿನ ಕಾರ್ಯ ವೈಖರಿ ಪರಿಶೀಲಿಸಬೇಕೆಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


