ಜಿಲ್ಲಾ ಸುದ್ದಿ

ದೇಶದ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯ

ದೇಶದ ಪ್ರತಿಯೊಂದು ಮಗುವಿಗೂ ಶಿಕ್ಷಣ ಸಿಗಲೇಬೇಕು. ನನಗೆ ಶಿಕ್ಷಕರ ಬಗ್ಗೆ ಅಪಾರ ಗೌರವವಿದೆ. ನೀವೆಲ್ಲರೂ ರಾಷ್ಟ್ರದ ಭವಿಷ್ಯ ನಿರ್ಮಾಣ ಮಾಡುವವರು. ದೇಶದ ಹಿತದೃಷ್ಟಿಯಿಂದ ಶಿಕ್ಷಕರ...

ದೇಶದ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅಮೂಲ್ಯ
ಸಿಎಂ ಸಿದ್ದರಾಮಯ್ಯ
Published On :

ನೆಲಮಂಗಲ: ``ದೇಶದ ಪ್ರತಿಯೊಂದು ಮಗುವಿಗೂ ಶಿಕ್ಷಣ ಸಿಗಲೇಬೇಕು. ನನಗೆ ಶಿಕ್ಷಕರ ಬಗ್ಗೆ ಅಪಾರ ಗೌರವವಿದೆ. ನೀವೆಲ್ಲರೂ ರಾಷ್ಟ್ರದ ಭವಿಷ್ಯ ನಿರ್ಮಾಣ ಮಾಡುವವರು. ದೇಶದ ಹಿತದೃಷ್ಟಿಯಿಂದ ಶಿಕ್ಷಕರ  ಜವಾಬ್ದಾರಿ ಬಹುದೊಡ್ಡದು,'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೆಲಮಂಗಲದ ಮಾದಾವರದಲ್ಲಿ ಏರ್ಪಡಿಸಿದ್ದ 27ನೇ ದ್ವೈವಾರ್ಷಿಕ ರಾಷ್ಟ್ರೀಯ ಶೈಕ್ಷಣಿಕ  ಸಮ್ಮೇಳನದಲ್ಲಿ ಮಾತನಾಡಿದ ಅವರು, ``ಸ್ವಾತಂತ್ರ್ಯ ಬಂದು 68 ವರ್ಷ ಕಳೆದಿದೆ. ಆದರೆ, ಸಮಾಜದಲ್ಲಿ ಇನ್ನೂ ಜಾತಿ ವ್ಯವಸ್ಥೆ, ಮೌಢ್ಯ, ಕಂದಾಚಾರ ಇಂದಿಗೂ ಇವೆ. ಇಷ್ಟೆಲ್ಲ ವಿಜ್ಞಾನ, ತಂತ್ರಜ್ಞಾನ ಇದ್ದೂ, ಇಡೀ  ವಿಶ್ವ ಒಂದು ಕುಟುಂಬ ಎನ್ನುತ್ತಿದ್ದರೂ, ನಮ್ಮಲ್ಲಿ ಇನ್ನೂ ಬದಲಾವಣೆ ಆಗಿಲ್ಲ,'' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.