ಕಳಸಾ ಬಂಡುರಿಗೆ ಟೆಕ್ಕಿಗಳ ಸಾಥ್
ಕಳಸಾಡೂರಿ ಕುಡಿಯುವ ನೀರಿನ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಐಟಿ ಬಿಟಿ ಕ್ಷೇತ್ರದ ಟೆಕ್ಕಿಗಳು ಪ್ರತಿಭಟನೆ ನಡೆಸಿದರು.

ಬೆಂಗಳೂರು: ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಐಟಿ ಬಿಟಿ ಕ್ಷೇತ್ರದ ಟೆಕ್ಕಿಗಳು ಪ್ರತಿಭಟನೆ ನಡೆಸಿದರು.
ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆದ ಪ್ರತಿಭಟನೆ ಯಲ್ಲಿ 30ಕ್ಕೂ ಹೆಚ್ಚು ಮಂದಿ ಭಾಗವಹಿಸಿ ರೈತರಿಗೆ ಬೆಂಬಲ ಸೂಚಿಸಿದರು. ಮಹಾದಾಯಿ ಯೋಜನೆ ಜಾರಿಗೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಕೇವಲ ಮತಬ್ಯಾಂಕಿಗಾಗಿ ಅಲ್ಲಿನ ಜನರನ್ನು ಬಳಸಿಕೊಳ್ಳುತ್ತಿವೆಯೇ ಹೊರತು ಜನರ ಸಂಕಷ್ಟಗಳಿಗೆ ಪರಿಹರಿಸುತ್ತಿಲ್ಲ. ಈ ಕೂಡಲೇ ಪ್ರಧಾನಮಂತ್ರಿಗಳು ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಮಾತುಕತೆ ನಡೆಸಬೇಕೆಂದು ಆಗ್ರಹಿಸಿದರು.
ಇದೇ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಆಗಮಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅವರು ಪ್ರಧಾನಿ ಮೇಲೆ ಒತ್ತಡ ತಂದರೆ ಕೆಲಸ ಆಗಲಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಟೆಕ್ಕಿಗಳು, ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹಾಕುವ ಕೆಲಸವನ್ನು ನಾವು ಮಾಡುತ್ತೇವೆ. ರಾಜ್ಯ ಸರ್ಕಾರದಿಂದ ಆಗಬೇಕಾದ ಕೆಲಸವನ್ನು ತಮ್ಮ ಮುಖಂಡತ್ವದಲ್ಲೇ ನಡೆಸಬೇಕೆಂದು ಕೋರಿದರು.
ಬಸವ ಮಂಟಪದ ಜಗದ್ಗುರು ಬಸವಕುಮಾರ ಸ್ವಾಮೀಜಿ, ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ, ಡಾ. ಚಂದ್ರಶೇಖರ ಕಂಬಾರ, ಟೆಕ್ಕಿಗಳಾದ ಶ್ರೀಕಾಂತ್, ಶಿವಾನಂದ, ಗುರುರಾಜ್, ಪುಟ್ಟಹೊನ್ನೇಗೌಡಸ, ಪ್ರಕಾಶ್ ನಲವಾಡಿ, ಮಾದವ್ ರೆಡ್ಡೇರ್, ಸಂತೋಷ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


