ಜಿಲ್ಲಾ ಸುದ್ದಿ

ಬೈಕ್‍ಗಳ ನಡುವೆ ಡಿಕ್ಕಿ :ಯುವಕನ ಸಾವು

ಎರಡು ಬೈಕ್‍ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಯುವಕನೊಬ್ಬ ಮೃತಪಟ್ಟು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ...

ಬೈಕ್‍ಗಳ ನಡುವೆ ಡಿಕ್ಕಿ :ಯುವಕನ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಎರಡು ಬೈಕ್‍ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಯುವಕನೊಬ್ಬ ಮೃತಪಟ್ಟು, ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡಬೆಲೆ ನಿವಾಸಿ ಗಿರೀಶ್ (24) ಮೃತಪಟ್ಟವರು. ಪೆಪ್ಸಿ ಕಂಪೆನಿ ಉದ್ಯೋಗಿಯಾಗಿರುವ ಇವರು ಕೆಲಸ ಮುಗಿಸಿ ರಾತ್ರಿ 9.45ರ ಸುಮಾರಿಗೆ ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದರು. ಮಾರ್ಗದ ಕೆಂಗೇರಿ ಉಪನಗರ ಮುಖ್ಯರಸ್ತೆಯ ಶೆಲ್ ಪೆಟ್ರೋಲ್ ಬಂಕ್ ಬಳಿ ಗಿರೀಶ್ ಬೈಕ್‍ಗೆ ಮತ್ತೊಂದು ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದ ಗಿರೀಶ್ ಹಾಗೂ ಇನ್ನೊಂದು ಬೈಕ್‍ನ ಹಿಂಬದಿ ಸವಾರ ಶಿವಮೊಗ್ಗದ ಗುರು(24) ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳಿಕ ಗಿರೀಶ್ ಹಾಗೂ ಗುರು ಅವರನ್ನು ಸ್ಥಳಿಯರ ನೆರವಿನಿಂದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಗಿರೀಶ್ ಸ್ಥಿತಿ ಬಿಗಡಾಯಿಸಿದ್ದರಿಂದ ವೈದ್ಯರ ಸಲಹೆ ಮೇರೆಗೆ ಭಾನುವಾರ ಮುಂಜಾನೆ 4.45ರ ಸುಮಾರಿಗೆ ರಾಜರಾಜೇಶ್ವರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದರು. ಗುರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.