ಜಿಲ್ಲಾ ಸುದ್ದಿ

ಹೊಸ ವರ್ಷದಲ್ಲಿ ಹೊಸ ಲೋಕಾಯುಕ್ತರ ಆಯ್ಕೆ

ಲೋಕಾಯುಕ್ತ ಆಯ್ಕೆ ಪ್ರಕ್ರಿಯೆ ಎರಡು ವಾರಗಳ ಕಾಲ ಮುಂದಕ್ಕೆ ಹೋಗಿದೆ. ಹೊಸ ವರ್ಷದಲ್ಲಿ ಹೊಸ ಲೋಕಾಯುಕ್ತರ ನೇಮಕಕ್ಕೆ ಪ್ರಕ್ರಿಯೆ ಆರಂಭವಾಗಲಿದೆ.

ಹೊಸ ವರ್ಷದಲ್ಲಿ ಹೊಸ ಲೋಕಾಯುಕ್ತರ ಆಯ್ಕೆ
ಲೋಕಾಯುಕ್ತ
Published On :

ಬೆಂಗಳೂರು: ಲೋಕಾಯುಕ್ತ ಆಯ್ಕೆ ಪ್ರಕ್ರಿಯೆ ಎರಡು ವಾರಗಳ ಕಾಲ ಮುಂದಕ್ಕೆ ಹೋಗಿದೆ. ಹೊಸ ವರ್ಷದಲ್ಲಿ ಹೊಸ ಲೋಕಾಯುಕ್ತರ ನೇಮಕಕ್ಕೆ ಪ್ರಕ್ರಿಯೆ ಆರಂಭವಾಗಲಿದೆ.
ಜೊತೆಗೆ ನೂತನ ಲೋಕಾಯುಕ್ತರ ರೇಸ್‍ನಲ್ಲಿ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ.ವಿಕ್ರಂಜಿತ್ ಸೇನ್, ಸಿರಿಯಾಕ್ ಜೋಸೆಫ್ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಈ ಮಧ್ಯೆಯೇ ಎಸ್.ಆರ್.ನಾಯಕ್ ಅವರು ಹೆಸರೂ ಕೂಡ ತೇಲಿಬಂದಿದೆ.
ಪೂರ್ವ ನಿಗದಿಯಂತೆ ನೂತನ ಲೋಕಾಯುಕ್ತರ ಆಯ್ಕೆ ಸಂಬಂಧ ಉನ್ನತ ಮಟ್ಟದ ಸಭೆ ಸೋಮವಾರ ನಡೆಯಬೇಕಾಗಿತ್ತು. ಆದರೆ, ಮುಖ್ಯಮಂತ್ರಿ, ವಿಪಕ್ಷ ನಾಯಕರು ವಿಧಾನಪರಿಷತ್ ಚುನಾವಣೆಯಲ್ಲಿ ತೊಡಗಿದ್ದಾರೆ. ಈ ಕಾರಣದಿಂದ ಸಭೆಯನ್ನು ಮುಂದೂಡಲಾಗಿದೆ. ಜನವರಿ ಮೊದಲ ವಾರದಲ್ಲಿ ನಡೆಯುವ ಸಭೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ, ಎರಡೂ ಸದನಗಳ ಸಭಾಧ್ಯಕ್ಷ ಸಭಾಪತಿಯವರು, ಪ್ರತಿಪಕ್ಷ ನಾಯಕರು ಹೊಸ ಲೋಕಾಯುಕ್ತರನ್ನು ಆಯ್ಕೆ ಮಾಡುವರು.
ಸಭೆ ಮುಂದಕ್ಕೆ: ಡಿಸೆಂಬರ್ 21ರಂದು ಸಭೆ ನಿಶ್ಚಯವಾಗಿತ್ತು, ನಂತರ 28ರಂದು ಸಭೆ ನಡೆಯುವುದೆಂದು ತೀರ್ಮಾನವಾಗಿತ್ತು. ಅಂತಿಮವಾಗಿ ಜನವರಿ ಮೊದಲ ವಾರದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ರಾಜ್ಯ ಉಚ್ಚ ನ್ಯಾಯಾಲಯದಿಂದ ಬರಬೇಕಾಗಿದ್ದ ಆಯ್ಕೆ ಪಟ್ಟಿ ಈ ವರೆಗೆ ಬಂದಿಲ್ಲ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.