ಬರಗೂರು ಹೇಳಿಕೆಗೆ ಖಂಡನೆ
ಶಿಕ್ಷಣ ಹಕ್ಕು (ಆರ್‍ಟಿಇ) ಕಾಯ್ದೆ ರದ್ದುಪಡಿಸಬೇಕೆಂಬ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಹೇಳಿಕೆಗೆ ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ ಖಂಡನೆ ವ್ಯಕ್ತಪಡಿಸಿದೆ...

ಬೆಂಗಳೂರು: ಶಿಕ್ಷಣ ಹಕ್ಕು (ಆರ್‍ಟಿಇ) ಕಾಯ್ದೆ ರದ್ದುಪಡಿಸಬೇಕೆಂಬ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಹೇಳಿಕೆಗೆ ಕರ್ನಾಟಕ ವಿದ್ಯಾರ್ಥಿಗಳ ಪೋಷಕರ ಜಾಗೃತಿ ವೇದಿಕೆ ಖಂಡನೆ ವ್ಯಕ್ತಪಡಿಸಿದೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಅಧ್ಯಕ್ಷ ರವಿ, ಕಡು ಬಡವರ ಮಕ್ಕಳಿಗೂ ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಾನೂನು ಜಾರಿ ಮಾಡಿದೆ. ಇದನ್ನು ರದ್ದುಗೊಳಿಸುವುದರಿಂದ ಈಗಾಗಲೇ ಸೇರಿಸುವ ಮಕ್ಕಳಿಗೆ ಅನ್ಯಾಯವಾಗಲಿದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಕಾಯ್ದುಕೊಳ್ಳದ ಕಾರಣ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲಾಗುತ್ತಿದೆ. ಈಗ ಆರ್‍ಟಿಇ ರದ್ದು ಮಾಡಿದರೆ ಈಗಾಗಲೇ ಸೇರಿಸಿರುವ ಮಕ್ಕಳ ಗತಿ ಏನು ಎಂದು ಪ್ರಶ್ನಿಸಿದರು. ಯಾವುದೇ ತಾರತಮ್ಯ ಎಸಗದೆ 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಏಕರೂಪದ ಗುಣಮಟ್ಟ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿದರು.
ಅನಧಿಕೃತ ಶಾಲೆಗಳನ್ನು ಪತ್ತೆ ಹಚ್ಚಿ ಅವುಗಳನ್ನು ಮುಚ್ಚಿಸುವಂತಹ ಕೆಲಸವಾಗಬೇಕು. ಖಾಸಗಿ ಶಾಲೆಗಳು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶಾಲೆಯ ಗೇಟಿನ ಮುಂಭಾಗ ಸೂಚನಾ ಫಲಕಗಳನ್ನು ಅಳವಡಿಸಬೇಕು. ಶಾಲಾ ಆಡಳಿತ ಮಂಡಳಿ ಮಕ್ಕಳಿಗೆ ತೊಂದರೆ ನೀಡಿದ ಪ್ರಕರಣಗಳು ಬೆಳಕಿಗೆ ಬಂದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಖಾಸಗಿ ಶಾಲಾ ಆಡಳಿತ ಮಂಡಳಿಯವರು ಶಿಕ್ಷಣ ಹಕ್ಕು ಕಾಯ್ದೆ ಅಡಿ ದಾಖಲಾದ ಮಕ್ಕಳಿಂದ ಹೆಚ್ಚಿನ ಡೊನೇಷನ್ ಪಡೆಯುತ್ತಿರುವ ಕಡೆ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


