ಮತಗಟ್ಟೆಯಲ್ಲಿ ಮೊಬೈಲ್ ನಿಷೇಧ
ವಿಧಾನ ಪರಿಷತ್‍ಗೆ ಸ್ಥಳೀಯ ಸಂಸ್ಥೆಯಿಂದ ಡಿ.27 ರಂದು ನಡೆಯುತ್ತಿರುವ ಚುನಾವಣೆ ಯಲ್ಲಿ ಮತಗಟ್ಟೆಗೆ ಮತದಾರರು ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿ. ಶಂಕರ್ ಅವರು ತಿಳಿಸಿದ್ದಾರೆ...

ಬೆಂಗಳೂರು: ವಿಧಾನ ಪರಿಷತ್‍ಗೆ ಸ್ಥಳೀಯ ಸಂಸ್ಥೆಯಿಂದ ಡಿ.27 ರಂದು ನಡೆಯುತ್ತಿರುವ ಚುನಾವಣೆ ಯಲ್ಲಿ ಮತಗಟ್ಟೆಗೆ ಮತದಾರರು ಮೊಬೈಲ್ ಮತ್ತು ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವಂತಿಲ್ಲ ಎಂದು ಜಿಲ್ಲಾಧಿಕಾರಿ ವಿ. ಶಂಕರ್ ಅವರು ತಿಳಿಸಿದ್ದಾರೆ.
ಡಿ.27ರಂದು ಬೆಂಗಳೂರು ಸ್ಥಳೀಯ ಸಂಸ್ಥೆ ಕ್ಷೇತ್ರದ ವಿಧಾನಪರಿಷತ್‍ಗೆ ನಡೆಯಲಿರುವ ಚುನಾವಣೆಗೆ ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲು, ಡಿ.25ರಂದು ಸಂಜೆ 4ಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಅನಂತರ ಯಾವುದೇ ವ್ಯಕ್ತಿ ಅಥವಾ ಪಕ್ಷದಿಂದ ನಡೆಯಲಿರುವ ವಿಧಾನಪರಿಷತ್ ನ ಚುನಾವಣೆಗೆ ಬಹಿರಂಗ ಪ್ರಚಾರ, ಮೆರವಣಿಗೆ, ಸಭೆಗಳನ್ನು ಮತ್ತು ಚುನಾವಣೆಗೆ ಸಂಬಂಧಿಸಿದ ಪ್ರಚಾರ ಸಾಮಾಗ್ರಿಗಳ ವಿತರಣೆ ಮಾಡಬಾರದು.ಈ ಅಧಿನಿಯಮ ಉಲ್ಲಂಘಿಸಿದರೆ 2 ವರ್ಷ ಶಿಕ್ಷೆ ಮತ್ತು ದಂಡ ವಿಧಿಸಲಾಗುವುದು.
ಮತದಾರರು ಮತಗಟ್ಟೆಯಲ್ಲಿ ನೀಡಲಾದ ಮತಪತ್ರವನ್ನು ಮಾತ್ರ ಮತಪೆಟ್ಟಿಗೆಯಲ್ಲಿ ಹಾಕತಕ್ಕದ್ದು, ಮತಪತ್ರವನ್ನು ಮತಗಟ್ಟೆಯಿಂದ ಹೊರಗೆ ತೆಗೆದುಕೊಂಡು ಹೋದರೆ ಅಥವಾ ಹಾನಿಗೊಳಿಸಿದರೆ, 1 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


