ಕಮ್ಯುನಿಸ್ಟ್ ಪಕ್ಷದ ನಾಯಕ ಪ್ರಸನ್ನಕುಮಾರ್ ನಿಧನ
ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಹಾಗೂ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್ (52) ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು...

ಬೆಂಗಳೂರು: ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಲಿ ಸದಸ್ಯ ಹಾಗೂ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್ (52) ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು.
ಅವರಿ ಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಬಳ್ಳಾರಿ ನಗರದಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ. ಯಲಹಂಕದಲ್ಲಿರುವ ತಮ್ಮ ನಿವಾಸದಿಂದ ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದಾಗ ಪಾರ್ಕಿನಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದರು. ಸುಮಾರು 2 ಗಂಟೆ ಕಳೆದರೂ ಮನೆಗೆ ಬಾರದಿದ್ದಾಗ ಅನುಮಾನಗೊಂಡ ಕುಟುಂಬ ಸದಸ್ಯರು ಪಾರ್ಕಿನಲ್ಲಿ ಮೂರು ಸುತ್ತು ಹುಡುಕಿದ್ದಾರೆ. ಅಂತಿಮವಾಗಿ ಪ್ರಸನ್ನ ಕುಮಾರ್ ಅವರು ಪಾರ್ಕ್‍ನಲ್ಲಿ ಬಿದ್ದಿರುವುದನ್ನು ಕಂಡು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರೊಳಗೆ ಅವರು ಅಸುನೀಗಿದ್ದರು. ರಾಜ್ಯದ ಕಾರ್ಮಿಕ ವರ್ಗದ ನಾಯಕರಲ್ಲಿ ಒಬ್ಬರಾಗಿದ್ದ ಪ್ರಸನ್ನಕುಮಾರ್ ಅವರು ಸಣ್ಣ, ಮಧ್ಯಮ ಕೈಗಾರಿಕೆಗಳ ಕಾರ್ಮಿಕ ಸಂಘಟನೆಗಳ ಮುಂದಾಳತ್ವ ವಹಿಸಿದ್ದರು.
ನೈರುತ್ಯ ರೈಲ್ವೇ ನೌಕರರ ಸಂಘ ಹಾಗೂ ಆಲ್ ಇಂಡಿಯಾ ಲೋಕೋ ರನ್ನಿಂಗ್ ಸ್ಟಾಫ್ ಅಸೋಸಿ ಯೇಷನ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟದ ಸಲಹೆ ಗಾರರೂ ಆಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಕಾರ್ಮಿಕ ಮುಖಂಡರಾದ ಜಿ.ಸಿ.ಬಯ್ಯಾ ರೆಡ್ಡಿ, ಜಿ.ಎನ್.ನಾಗರಾಜ್, ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ, ಪ್ರಧಾನ ಕಾರ್ಯದರ್ಶಿ ಶಿವಶಂಕರ್, ಜಯಕು ಮಾರ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು. ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


