ಜಿಲ್ಲಾ ಸುದ್ದಿ

ಮಲ್ಲೇಶ್ವರಂನ ಎಂಡಿ ಬ್ಲಾಕ್ ರಸ್ತೆಯಲ್ಲಿ ಘಟನೆ

ಬ್ಲಾಕ್ ರಸ್ತೆಯೊಂದರ ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಮೃತಪಟ್ಟ ಘಟನೆ ಬುಧವಾರ ನಡೆದಿದೆ...

ಮಲ್ಲೇಶ್ವರಂನ ಎಂಡಿ ಬ್ಲಾಕ್ ರಸ್ತೆಯಲ್ಲಿ ಘಟನೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಬ್ಲಾಕ್ ರಸ್ತೆಯೊಂದರ ಪಾದಚಾರಿ ಮಾರ್ಗದಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.

ಮೂಲತಃ ಗದಗ ಜಿಲ್ಲೆಯ ಶಿವಪ್ಪ ವೀರುಪಾಕ್ಷಪ್ಪ ಬಡಿಗೇರ್(55) ಮೃತಪಟ್ಟವರು. ನಗರದ ಕಡಬಗೆರೆಯಲ್ಲಿ ವಾಸವಿದ್ದ ಇವರು ಅಡುಗೆ ಭಟ್ಟರಾಗಿದ್ದರು. ಕೆಲಸದ ನಿಮಿತ್ತ ಬೆಳಗ್ಗೆ 8.30ರ ಸುಮಾರಿನಲ್ಲಿ ಮಲ್ಲೇಶ್ವರಂ ಎಂಡಿ ಬ್ಲಾಕ್‍ನ 5ನೇ ಅಡ್ಡ ರಸ್ತೆಯಲ್ಲಿರುವ ಬಸ್ ನಿಲ್ದಾಣದ ಕಡೆಗೆ ನಡೆದು ಬರುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ವೇಳೆ ನೆರವಿಗೆ ಧಾವಿಸಿದ ಸ್ಥಳೀಯರು ಶಿವಪ್ಪ ಬಡಿಗೇರ್ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದ ರಾದರೂ ಅಷ್ಟರಲ್ಲಿ ಅವರು ಕೊನೆಯು ಸಿರೆಳೆದಿದ್ದರು ಎಂದು ಪೊಲೀಸರು ತಿಳಿಸಿದರು.

ಮೃತರು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಸುತ್ತಿದ್ದು, ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಬುಧವಾರ ನಡೆದು ಬರುವಾಗ ಹೃದಯಾಘಾತವಾಗಿ ಕುಸಿದು ಬಿದ್ದು ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.