ಜಿಲ್ಲಾ ಸುದ್ದಿ

ಸೈಕಲ್‍ಗೆ ಕಾರು ಡಿಕ್ಕಿ: ಓರ್ವ ಸಾವು

ಸೈಕಲ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಯಲಹಂಕ...

ಸೈಕಲ್‍ಗೆ ಕಾರು ಡಿಕ್ಕಿ: ಓರ್ವ ಸಾವು
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಸೈಕಲ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 
ಮೂಲತಃ ಪಶ್ಚಿಮ ಬಂಗಾಳದ ಮುಸ್ತಾಕ್ ಶೇಖ್ (55) ಮೃತಪಟ್ಟವರು. ಗಾರೆ ಕೆಲಸ ಮಾಡುವ ಇವರು ಕೆಂಚನಹಳ್ಳಿಯಲ್ಲಿ ವಾಸವಿದ್ದರು. ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಸಹ ಕೆಲಸಗಾರ
ಹಸನ್(24)ನೊಂದಿಗೆ ಕೆಲಸಕ್ಕೆ ತೆರಳುವಾಗ ದೊಡ್ಡಬಳ್ಳಾಪುರ ರಸ್ತೆಯ ಅನಂತಪುರ ಗೇಟ್ ಬಳಿ ವೇಗವಾಗಿ ಬಂದ ಇನೋವಾ ಕಾರು ಸೈಕಲ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಸೈಕಲ್ ಹಿಂಬದಿ ಕುಳಿತ್ತಿದ್ದ ಮುಸ್ತಾಕ್ ಶೇಖ್ ತೀವ್ರವಾಗಿ ಗಾಯಗೊಂಡಿದ್ದರು. 
ಈ ವೇಳೆ ನೆರವಿಗೆ ಧಾವಿಸಿದ ಸ್ಥಳೀಯರು ಗಾಯಾಳು ಮುಸ್ತಾಕ್ ಶೇಖ್‍ರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಸೈಕಲ್ ಚಾಲಕ ಹಸನ್ ಯಾವುದೇ ಗಾಯಗಳಾಗದೆ ಸಿನಿಮೀಯ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಠಾಣೆ ಪೊಲೀಸರು, ಕಾರು ಹಾಗೂ ಚಾಲಕನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.