ಜಿಲ್ಲಾ ಸುದ್ದಿ

ಕುತೂಹಲ ಮೂಡಿಸಿದ ಜೆಡಿಎಸ್ ಅಭ್ಯರ್ಥಿ ನಾಪತ್ತೆ

ಚಿತ್ರದುರ್ಗ ವಿಧಾನಪರಿಷತ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಲ್. ಸೋಮಣ್ಣ ಮತದಾನಕ್ಕೆ ಎರಡು ದಿನ ಇರುವಾಗ ನಾಪತ್ತೆ ಯಾಗಿರುವ ಬಗ್ಗೆ ಭಾರಿ ಸುದ್ದಿ ಹಬ್ಬಿದ್ದು, ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಆಕ್ರೋಶ ವ್ಯಕ್ತವಾಗಿದೆ...

ಕುತೂಹಲ ಮೂಡಿಸಿದ ಜೆಡಿಎಸ್ ಅಭ್ಯರ್ಥಿ ನಾಪತ್ತೆ
(ಸಾಂದರ್ಭಿಕ ಚಿತ್ರ)
Published On :

ಚಿತ್ರದುರ್ಗ/ಚಳ್ಳಕೆರೆ: ಚಿತ್ರದುರ್ಗ ವಿಧಾನಪರಿಷತ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಲ್. ಸೋಮಣ್ಣ ಮತದಾನಕ್ಕೆ ಎರಡು ದಿನ ಇರುವಾಗ ನಾಪತ್ತೆ ಯಾಗಿರುವ ಬಗ್ಗೆ ಭಾರಿ ಸುದ್ದಿ ಹಬ್ಬಿದ್ದು, ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆದರೆ, ತಾವು ಎಲ್ಲೂ ಹೋಗಿಲ್ಲ, ಕ್ಷೇತ್ರದಲ್ಲೇ ಇದ್ದೇನೆ.

ಮುಖಂಡರು ನನ್ನ ಬಳಿ ಹಣದ ಬೇಡಿಕೆ ಇಟ್ಟಿದ್ದು, ಕೊಡಲೊಪ್ಪದ್ದಕ್ಕೆ ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆಂದು ಸೋಮಣ್ಣ ಪಕ್ಷದ ಮುಖಂಡರ ವಿರುದ್ಧವೇ ಹರಿಹಾಯ್ದಿದ್ದಾರೆ.
ಎರಡು ದಿನಗಳಿಂದಲೂ ಸೋಮಣ್ಣ ಎಲ್ಲಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿಲ್ಲ. ಅಂತಿಮ ಕ್ಷಣಗಳಲ್ಲಿ ಮತಯಾಚನೆ ಮಾಡಬೇಕಿದ್ದ
ಸಮಯದಲ್ಲೇ ಕಾಣುತ್ತಿಲ್ಲ ಎಂದು ಮುಖಂಡರು ಆರೋಪಿಸಿದ್ದಾರೆ. ``ನಮ್ಮಂಥ ನಿಷ್ಠಾವಂತ ಕಾರ್ಯಕರ್ತರಿಗೆ ಈ ಚುನಾವಣೆ ಆಘಾತಕಾರಿ. ಅಭ್ಯರ್ಥಿ ನಾಮಪತ್ರ ಸಲ್ಲಿಸಿದಾಗ ನಮಗೆ ಗೆಲ್ಲುವ ಆತ್ಮವಿಶ್ವಾಸವಿತ್ತು. ನಮ್ಮ ಕರೆಯನ್ನೇ ಸ್ವೀಕರಿಸುತ್ತಿಲ್ಲ'' ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ಯಶೋಧರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಣದಿಂದ ನಿವೃತ್ತಿ: ರಘುಮೂರ್ತಿ: ಆದರೆ, ಈ ಬಗ್ಗೆ ಕನ್ನಡಪ್ರಭದ ಜತೆ ಮಾತನಾಡಿದ ಚಳ್ಳಕೆರೆ ಕಾಂಗ್ರೆಸ್ ಶಾಸಕ ಟಿ. ರಘುಮೂರ್ತಿ, ``ಸೋಮಣ್ಣ ಶನಿವಾರ ತಮ್ಮ ನಿರ್ಧಾರವನ್ನು ದಿಡಿsೀರ್ ಬದಲಾಯಿಸಿ ಕಣದಿಂದ ನಿವೃತ್ತಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ರಘು ಆಚಾರ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬೇಷರತ್ತಾಗಿ ಉಮೇದುವಾರಿಕೆಯಿಂದ ಹಿಂದೆ ಸರಿದಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯ ಕರ್ತರಿಗೆ ಕಾಂಗ್ರೆಸ್ ಅಭ್ಯರ್ಥಿ ರಘು ಆಚಾರ್ ಅವರನ್ನು ಬೆಂಬಲಿಸುವಂತೆ ಮನವಿ
ಮಾಡಿಕೊಂಡಿದ್ದಾರೆಂದು ತಿಳಿಸಿದ್ದಾರೆ.

ನಿವೃತ್ತಿಯಾಗಿಲ್ಲ: ಸ್ಪಷ್ಟನೆ -: ಶಾಸಕ ರಘುಮೂರ್ತಿ ಪ್ರಕಾರ ಸೋಮಣ್ಣ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಆದರೆ, ಸೋಮಣ್ಣ ಹೇಳೋದೇ ಬೇರೆ. `ನಾನು ಕಣದಿಂದ ನಿವೃತ್ತಿಯಾಗಿಲ್ಲ. ಈಗಲೂ ಜೆಡಿಎಸ್ ಅಭ್ಯರ್ಥಿಯಾಗಿದ್ದು, ಈ ಗೊಂದಲದ ವಾತಾವರಣವನ್ನು ಪಕ್ಷದ ಮುಖಂಡರೇ ಸೃಷ್ಟಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹರಿಹರ ಶಾಸಕ ಎಚ್.ಎಚ್. ಶಿವಶಂಕರ್, ಚಿತ್ರದುರ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ. ಯಶೋಧರ್ ಮತ್ತು ಪಕ್ಷದ ಮುಖಂಡರು ಅವರು ತಮ್ಮಿಂದ ತಾಲೂಕಿಗೆ ಇಂತಿಷ್ಟು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಾವು ನೇರವಾಗಿ ಮತದಾರರನ್ನು ಭೇಟಿ ಮಾಡಿ, ಅವರ ಬೇಡಿಕೆಗಳನ್ನು ಈಡೇರಿಸಲು ಸಿದ್ಧನಿದ್ದೆ. ಆದರೂ ಮುಖಂಡರು ದೊಡ್ಡ ಪ್ರಮಾಣದ ಹಣ ಕೇಳಿದರು. ಈ ಕಾರಣಕ್ಕೆ ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. . ಅಲ್ಲದೆ ಮುಖಂಡರು ಬಿಜೆಪಿ ಜತೆ ಶಾಮೀಲಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.