ಜಿಲ್ಲಾ ಸುದ್ದಿ

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ

ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇವಪುರದಲ್ಲಿ ಭಾನುವಾರ ನಡೆದಿದೆ...

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ
(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇವಪುರದಲ್ಲಿ ಭಾನುವಾರ
ನಡೆದಿದೆ.

ರಿಷಿ (6) ಮತ್ತು ಹರ್ಷಿತ್ (2) ಅವರಿಗೆ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿರುವ ವೀಣಾ(27) ತಾನು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹದೇವಪುರದ
ಕಾವೇರಿನಗರದಲ್ಲಿ ಪತಿ ಕೃಷ್ಣ (33) ಹಾಗೂ ಇಬ್ಬರು ಮಕ್ಕಳೊಂದಿಗೆ ವೀಣಾ ವಾಸವಾಗಿದ್ದರು.

ಕ್ಲಬ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ ಭಾನುವಾರ ಬೆಳಗ್ಗೆ ಕೆಲಸಕ್ಕೆ ಹೋಗಿದ್ದರು. ಸಂಜೆ 5 ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿ ರುವುದು ಗೊತ್ತಾಗಿದೆ. ಸ್ಥಳಕ್ಕಾಗಮಿಸಿದ ಮಹದೇವಪುರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.