ಜಿಲ್ಲಾ ಸುದ್ದಿ

ವರ್ಷಾಚರಣೆಗೆ ಮಧ್ಯರಾತ್ರಿ ತನಕ ಬಿಎಂಟಿಸಿ ಸೇವೆ

ನಗರದ ಎಂ.ಜಿ.ರಸ್ತೆಯಲ್ಲಿ ಡಿ.31ರಂದು ನಡೆಯಲಿರುವ ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನಗರದ ಬಿಗ್-10 ಮಾರ್ಗಗಳಲ್ಲಿ ಅಂದು ಬಸ್‍ಗಳ ಸಂಚಾರ ಅವಧಿಯನ್ನು...

ವರ್ಷಾಚರಣೆಗೆ ಮಧ್ಯರಾತ್ರಿ ತನಕ ಬಿಎಂಟಿಸಿ ಸೇವೆ
(ಸಂಗ್ರಹ ಚಿತ್ರ)
Published On :

ಬೆಂಗಳೂರು: ನಗರದ ಎಂ.ಜಿ.ರಸ್ತೆಯಲ್ಲಿ ಡಿ.31ರಂದು ನಡೆಯಲಿರುವ ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನಗರದ ಬಿಗ್-10 ಮಾರ್ಗಗಳಲ್ಲಿ ಅಂದು ಬಸ್‍ಗಳ ಸಂಚಾರ ಅವಧಿಯನ್ನು ತಡರಾತ್ರಿ 2.30ರವರೆಗೆ ವಿಸ್ತರಿಸಿದೆ.

ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದಿಂದ ಬಿಗ್-10 ಮಾರ್ಗಗಳಾದ ಕಾಡುಗೋಡಿ ಬಸ್ ನಿಲ್ದಾಣ, ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಕೆಂಗೇರಿ ಹೌಸಿಂಗ್
ಬೋರ್ಡ್ ಕ್ವಾರ್ಟ್‍ರ್ಸ್, ಜನಪ್ರಿಯ ಟೌನ್‍ಶಿಪ್, ನೆಲಮಂಗಲ, ಯಲಹಂಕ ಉಪನಗರ, ಆರ್.ಕೆ. ಹೆಗಡೆ ನಗರ, ಬಾಗಲೂರು ಹಾಗೂ ಹೊಸಕೋಟೆ ಮಾರ್ಗಗಳಲ್ಲಿ ಬಸ್‍ಗಳು ತಡರಾತ್ರಿ 2.30ರವರೆಗೆ ಸಂಚರಿಸಲಿವೆ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.