ದಾನದ ಬದಲು ಜಾನುವಾರು ಮಾರಿ ಹಣವನ್ನು ಹುಂಡಿಗೆ ಹಾಕಿ
ಮಲೈಮಹಾದೇಶ್ವರ ಬೆಟ್ಟದಲ್ಲಿ ಭಕ್ತರು ಹಸು, ಕರು, ಕುರಿ ಮತ್ತಿತರ ಜಾನುವಾರುಗಳನ್ನು ದಾನ ಮಾಡುವುದು ಹಾಗೂ ಆ ಪ್ರಾಣಿಗಳನ್ನು ಹರಾಜು ...

ಬೆಂಗಳೂರು: ಮಲೈಮಹಾದೇಶ್ವರ ಬೆಟ್ಟದಲ್ಲಿ ಭಕ್ತರು ಹಸು, ಕರು, ಕುರಿ ಮತ್ತಿತರ ಜಾನುವಾರುಗಳನ್ನು ದಾನ ಮಾಡುವುದು ಹಾಗೂ ಆ ಪ್ರಾಣಿಗಳನ್ನು ಹರಾಜು ಹಾಕುವುದನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಬದಲಿಗೆ ಭಕ್ತರೇ ದಾನದ ಪ್ರಾಣಿಗಳನ್ನು ಮಾರಾಟ ಮಾಡಿ ಆ ಹಣವನ್ನು ಹುಂಡಿಗೆ ಹಾಕಬಹುದಾಗಿದೆ.
ಮಲೈಮಹದೇಶ್ವರ ಬೆಟ್ಟವು ಅರಣ್ಯ ಪ್ರದೇಶದಲ್ಲಿರುವುದರಿಂದ ಅಲ್ಲಿ ವನ್ಯಜೀವಿಗಳಿವೆ. ಆ ಪರಿಸರದಲ್ಲಿ ದಾನ ಕೊಟ್ಟ ಪ್ರಾಣಿಗಳನ್ನು ಸಾಕುವುದು ಕಷ್ಟ. ಆ ಕಾರಣದಿಂದ ಪ್ರಾಣಿಗಳ ದಾನ ಸ್ವೀಕಾರ ಹಾಗೂ ಹರಾಜು ಸ್ಥಗಿತಗೊಳಿಸಲಾಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಹೇಳಿದ್ದಾರೆ. ಈ ಹರಾಜು ಹಾಕಿದ ಪ್ರಾಣಿಗಳನ್ನು ಖರೀದಿದಾರರು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು ಎಂಬುದು ಗೊತ್ತಾಗಿಲ್ಲ. ಗೋಶಾಲೆ ಆರಂಭಕ್ಕೂ ಜಾಗದ ಸಮಸ್ಯೆ ಇದೆ. ಆ ಕಾರಣದಿಂದ ಹಿಂದಿನಿಂದ ನಡೆದುಕೊಂಡು ಬಂದ ವ್ಯವಸ್ಥೆಯಂತೆ ಹರಾಜು ಹಾಕಲಾಗುತ್ತಿತ್ತು. ಈಗ ಅದನ್ನು ಸ್ಥಗಿತಗೊಳಿಸಿದ್ದೇವೆ.
ಮಲೈಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ ಸಾಕಷ್ಟು ಮೂಲ ಸೌಲಭ್ಯಗಳನ್ನು ಭಕ್ತರಿಗೆ ಕಲ್ಪಿಸಲಾಗಿದೆ. ಜನವರಿ 1 ರಂದು ನಡೆಯುವ ಪ್ರಾಧಿಕಾರದ ಸಭೆಯಲ್ಲಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಗೋಶಾಲೆ ಆರಂಭಿಸಲು ಸಾಧ್ಯವಿದೆಯೇ ಎಂಬುದನ್ನು ಚರ್ಚಿಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


