ಜಿಲ್ಲಾ ಸುದ್ದಿ

ವಿವಿ ಪ್ರವೇಶ ಪ್ರಕ್ರಿಯೆ ಇನ್ಮುಂದೆ ಆನ್ ಲೈನ್

ವಿಶ್ವವಿದ್ಯಾಲಯಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಸಂಪೂರ್ಣ ಆನ್ ಲೈನ್ ಮುಖಾಂತರವೇ ನಡೆಸಬೇಕೆಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ದೇಶದ ಎಲ್ಲಾ ವಿವಿಗಳಿಗೆ ಸೂಚನೆ ನೀಡಿದೆ.

ವಿವಿ ಪ್ರವೇಶ ಪ್ರಕ್ರಿಯೆ ಇನ್ಮುಂದೆ ಆನ್ ಲೈನ್
ವಿವಿ ಪ್ರವೇಶ ಪ್ರಕ್ರಿಯೆ ಇನ್ಮುಂದೆ ಆನ್ ಲೈನ್
Published On :

ಬೆಂಗಳೂರು: ವಿಶ್ವವಿದ್ಯಾಲಯಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಸಂಪೂರ್ಣ ಆನ್ ಲೈನ್ ಮುಖಾಂತರವೇ ನಡೆಸಬೇಕೆಂದು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ದೇಶದ ಎಲ್ಲಾ ವಿವಿಗಳಿಗೆ ಸೂಚನೆ ನೀಡಿದೆ.
ವಿವಿಗಳ ಪ್ರವೇಶಾತಿ ಪ್ರಕ್ರಿಯೆ ಅಚ್ಚುಕಟ್ಟಾಗಿ, ಪಾರದರ್ಶಕ ಮತ್ತು ಸುಸೂತ್ರವಾಗಿ ನಡೆಯ ಬೇಕೆಂದರೆ ಆನ್‍ಲೈನ್ ವ್ಯವಸ್ಥೆ ಜಾರಿಗೆ ತರಬೇಕು. ಈ ಹಿನ್ನೆಲೆ ಯಲ್ಲಿ 2016ರ ಜೂನ್-ಜುಲೈ ನಿಂದ ಆರಂಭವಾಗುವ ಮುಂದಿನ ಶೈಕ್ಷಣಿಕ ವರ್ಷದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ವಿವಿ ಗಳಿಗೆ ಸೂಚಿಸಿದೆ. ಸದ್ಯ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಿದ್ದರೆ ಈ ಸಾಲಿನಿಂದ ಪೂರ್ಣ ಪ್ರಮಾಣದಲ್ಲಿ ಪ್ರವೇಶ ಪ್ರಕ್ರಿಂುÉುಯನ್ನು ಆನ್‍ಲೈನ್‍ನಲ್ಲೇ ನಡೆಸಬೇಕು ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ಕರ್ನಾಟಕದ ವಿಚಾರಕ್ಕೆ ಬಂದರೆ, ಈಗಾಗಲೇ ಬಹುತೇಕ ಎಲ್ಲಾ ವಿವಿಗಳು ಆನ್ ಲೈನ್ ಪ್ರವೇಶ ಪ್ರಕ್ರಿಯೆಯನ್ನು ಅಳವಡಿಸಿಕೊಂಡಿವೆ.  ಕೆಲವು ವಿವಿ ಗಳಲ್ಲಿ ಮಾತ್ರ ಪೂರ್ತಿಯಾಗಿ ಅನುಷ್ಠಾನಗೊಂಡಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.