ಜಿಲ್ಲಾ ಸುದ್ದಿ

ಕಲ್ಬುರ್ಗಿಯಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ: 4 ಸಾವು

ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಕಲ್ಬುರ್ಗಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ...

ಕಲ್ಬುರ್ಗಿಯಲ್ಲಿ ಲಾರಿ-ಕಾರು ನಡುವೆ ಭೀಕರ ಅಪಘಾತ: 4 ಸಾವು
ಕಲ್ಬುರ್ಗಿಯಲ್ಲಿ ಅಪಘಾತ (ಸಂಗ್ರಹ ಚಿತ್ರ)
Published On :

ಕಲ್ಬುರ್ಗಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಕಲ್ಬುರ್ಗಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕಲ್ಬುರ್ಗಿ ಜಿಲ್ಲೆಯ ಹೊರವಲಯದ ರಾಜಾಪೂರ ರಿಂಗ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಅದೇ ರಸ್ತೆಯಲ್ಲಿ ಮುಂಬದಿಯಲ್ಲಿ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ  ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಕಲ್ಬುರ್ಗಿ ಸಮೀಪದ ಶರಣಸಿರಸಗಿ ಗ್ರಾಮದವರಾದ ಮಹದೇವ ಜಂಬಗಿ(36), ಪತ್ನಿ  ಗೋದಾವರಿ(30) ಮಗ ಮಲ್ಲಿಕಾರ್ಜುನ (4) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಒಂದು 4 ತಿಂಗಳ ಮಗು ಕೂಡ ಸಾವನ್ನಪ್ಪಿದೆ.

ಅಪಘಾತಕ್ಕೀಡಾದ ಕಾರು ಕುಸನೂರಿನಿಂದ ಶರಣಸಿರಸಗಿ ಗ್ರಾಮಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲವಾದರೂ, ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.