ಫೇಸ್‍ಬುಕ್‍ನಲ್ಲಿ ಮುರುಗನ್ ವಿರುದ್ಧ ಅವಹೇಳನಕಾರಿ ಪೋಸ್ಟ್
ಮಂಗಳೂರು ನಗರ ಪೊಲೀಸ್ ಕಮಿಷನರ್ ಮುರುಗನ್ ವಿರುದ್ಧ ಫೇಸ್ ಬುಕ್‍ನಲ್ಲಿ ಅವಹೇಳನಕಾರಿಯಾಗಿ ಬರೆದ ಯುವಕನ ಬಂಧನಕ್ಕೆ ಪೊಲೀಸರು ಬಲೆ ...

ಮಂಗಳೂರು: ಮಂಗಳೂರುನಗರ ಪೊಲೀಸ್ ಕಮಿಷನರ್ ಮುರುಗನ್ ವಿರುದ್ಧ ಫೇಸ್ ಬುಕ್‍ನಲ್ಲಿ ಅವಹೇಳನಕಾರಿಯಾಗಿ ಬರೆದ ಯುವಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿ ಅಕ್ಬರ್ ಕುದ್ರೋಳಿ ಎಂಬಾತ ಮುರುಗನ್ ವಿರುದ್ಧ ಕೀಳು ಅಭಿರುಚಿಯ ಬರಹವನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದ.ಈ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಂಗಳೂರು ಉತ್ತರ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದರು.
ಆರೋಪಿ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಇನ್ನು 2-3 ದಿನಗಳಲ್ಲಿ ಬಂಧಿಸಲಾಗುವುದು ಎಂದು ಇನ್ಸ್ ಪೆಕ್ಟರ್ ಶಾಂತಾರಾಮ್ ತಿಳಿಸಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕುರಿತಾದ ಪ್ರಕರಣಗಳನ್ನು ನಾನು ಎದುರಿಸುವುದರಿಂದ ಕೆಲವರು ನನ್ನನ್ನು ದ್ವೇಷಿಸಬಹುದು. ಈ ಪ್ರಕರಣದ ಕುರಿತು ನನಗೆ ವೈಯಕ್ತಿಕ ದ್ವೇಷ ಇಲ್ಲ. ದೂರು ದಾಖಲಾಗಿರುವುದರಿಂದ ಕಾನೂನಿನಡಿ ತೆಗೆದುಕೊಳ್ಳಬಹುದಾದ ಕ್ರಮಗ-ಳನ್ನು ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಮುರುಗನ್ ಪ್ರತಿಕ್ರಿಯಿಸಿದ್ದಾರೆ. `ಫೇಸ್ ಬುಕ್‍ನಲ್ಲಿ ನನ್ನನ್ನು ಅವಹೇಳನ ಮಾಡಿರುವ ಪ್ರಕರಣ ವೈಯಕ್ತಿಕವಾಗಿರುವ ಕಾರಣ ಈ ಬಗ್ಗೆ ಹೆಚ್ಚು ಹೇಳಲಾರೆ ಎಂದು ಸುದ್ದಿಗೊಷ್ಠಿಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


