ಜಿಲ್ಲಾ ಸುದ್ದಿ

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು

ಅತಿವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ದೇವನಹಳ್ಳಿ...

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು
ಸಾಂದರ್ಭಿಕ ಚಿತ್ರ
Published On :
ದೇವನಹಳ್ಳಿ: ಅತಿವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ದೇವನಹಳ್ಳಿ ಬಳಿ ನಡೆದಿದೆ.
ಬೆಳಿಗ್ಗೆ 9 ಗಂಟೆಗೆ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಭುವನಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು.
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಎಸ್‌ಎಲ್‌ವಿ ಖಾಸಗಿ ಬಸ್ ವೇಗವಾಗಿ ಬಂದ ಪರಿಣಾಮ ಪಲ್ಟಿ ಹೊಡೆದಿದೆ. ಪಲ್ಟಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಬಗ್ಗೆ ಹೆಚ್ಚು ಮಾಹಿತಿ ತಿಳಿದು ಬಂದಿಲ್ಲ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.