ಜಿಲ್ಲಾ ಸುದ್ದಿ

ಭದ್ರತೆಗಾಗಿ ಮಥಾಯಿ ಪತ್ರ

ತಮಗೆ ಸೂಕ್ತ ಭದ್ರತೆ ನೀಡಬೇಕೆಂದು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ. ಮಥಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ, ತಾವು ಕಾರ್ಯನಿರ್ವಹಿಸುವ ಜಾಹಿರಾತು ವಿಭಾಗದಲ್ಲಿ ಸಿಸಿ ಕ್ಯಾಮರಾ...

ಭದ್ರತೆಗಾಗಿ ಮಥಾಯಿ ಪತ್ರ
ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ತಮಗೆ ಸೂಕ್ತ ಭದ್ರತೆ ನೀಡಬೇಕೆಂದು ಬಿಬಿಎಂಪಿ ಜಾಹೀರಾತು ವಿಭಾಗದ ಸಹಾಯಕ ಆಯುಕ್ತ ಕೆ. ಮಥಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ, ತಾವು ಕಾರ್ಯನಿರ್ವಹಿಸುವ ಜಾಹಿರಾತು ವಿಭಾಗದಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಬಿಬಿಎಂಪಿ ಆಯುಕ್ತರನ್ನು ಕೋರಿದ್ದಾರೆ.

ನಗರ ಪೊಲೀಸ್ ಆಯುಕ್ತರಿಗೆ ಮತ್ತು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ  ಪತ್ರದಲ್ಲಿ ತಾವು ಜಾಹೀರಾತು ಮಾಫಿಯಾ ವಿರುದ್ಧ ಹೋರಾಟ ಮಾಡುತ್ತಿರುವುದಕ್ಕಾಗಿ
ತಮಗೆ ಬೆದರಿಕೆಯ ಕರೆಗಳು ಬರುತ್ತಿವೆ. ಹೀಗಾಗಿ ತಮಗೆ ಜೀವ ಬೆದರಿಕೆ ಇದೆ. ಆದರಿಂದ ನನಗೆ ಸೂಕ್ತ ಭದ್ರತೆ ನೀಡಿ ಎಂದು ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ತಮ್ಮ ಕಚೇರಿಗೆ ಸಿಸಿ ಕ್ಯಾಮರ ಅಳವಡಿಸಿ ಕಚೇರಿಗೂ ಸಹ ಸೂಕ್ತ ಭದ್ರತೆ ನೀಡಿ ಎಂದು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕಚೇರಿಗೆ ಸಿ.ಸಿ. ಕ್ಯಾಮರ ಅಳವಡಿಸಿರುವು ದರಿಂದ ಕಚೇರಿಯಲ್ಲಿರುವ ಹಲವು ಮುಖ್ಯ ವಾದ ಕಡತಗಳ ರಕ್ಷಣೆ ಸಾಧ್ಯವಾಗುತ್ತದೆ. ಜೊತೆಗೆ ಕಚೇರಿಯ ಆಗುಹೋಗುಗಳ ಬಗ್ಗೆ ಮಾಹಿತಿ ದೊರೆಯಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.