ಮೊಬೈಲ್ ಕಳ್ಳರ ಬಂಧನ
ಮೊಬೈಲ್, ಎಟಿಎಂ ಕಾರ್ಡ್ ಹಾಗೂ ಬ್ಯಾಂಕ್‍ಗಳಲ್ಲಿ ಕಳವು ಮಾಡುತ್ತಿದ್ದ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ...

ಬೆಂಗಳೂರು: ಮೊಬೈಲ್, ಎಟಿಎಂ ಕಾರ್ಡ್ ಹಾಗೂ ಬ್ಯಾಂಕ್‍ಗಳಲ್ಲಿ ಕಳವು ಮಾಡುತ್ತಿದ್ದ ಮೂವರನ್ನು ಚಿಕ್ಕಜಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿದ್ಯಾನಗರ ಕ್ರಾಸ್‍ನಲ್ಲಿರುವ ಸುಭಾಷ್‍ನಗರ ನಿವಾಸಿ ಪ್ರವೀಣ್ (22), ಅಶೋಕ್ (22) ಹಾಗೂ ಟಿ.ಆರ್.ಪಿ.ಕ್ಯಾಂಪ್‍ನ ಪ್ರಕಾಶ್ (22) ಬಂಧಿತ ಆರೋಪಿಗಳು. ಬಂಧಿತರಿಂದ 19 ಮೊಬೈಲ್ ಗಳು ಹಾಗೂ ಎಟಿಎಂ ಕಾರ್ಡ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಪ್ರವೀಣ್ ಚಿಕ್ಕಜಾಲ ವ್ಯಾಪ್ತಿಯಲ್ಲಿ ಪ್ರಯಾಣಿಕನಂತೆ ಬಸ್‍ನಲ್ಲಿ ಸಂಚರಿಸಿ ಮೊಬೈಲ್ ಹಾಗೂ ಎಟಿಎಂ ಕಾರ್ಡ್‍ಗಳನ್ನು ಕಳವು ಮಾಡುತ್ತಿದ್ದ. ಜೊತೆಗೆ ತನ್ನ ಸಹಚರರೊಂದಿಗೆ ಸೇರಿ ಹಲವು ಬ್ಯಾಂಕ್ ಗಳಲ್ಲಿ ಕಳವು ಮಾಡುತ್ತಿದ್ದ. ಮೊಬೈಲ್ ಹಾಗೂ ಎಟಿಎಂ ಕಾರ್ಡ್‍ಗಳ ಕಳವು ಹೆಚ್ಚಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಪ್ರವೀಣ್‍ನನ್ನು ಬಂಧಿಸಿದ್ದಾರೆ.
ಈತನಿಂದ ಸುಮಾರು ರು.1.37 ಲಕ್ಷ ಮೌಲ್ಯದ ಸ್ಯಾಮ್ ಸಂಗ್ ಮೊಬೈಲ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ಈತನನ್ನು ವಿಚಾರಣೆಗೊಳಪಡಿಸಿದಾಗ ಸಹಚರರಾದ ಅಶೋಕ್ ಮತ್ತು ಪ್ರಕಾಶ್ ಜೊತೆ ಬ್ಯಾಂಕ್ ಹಾಗೂ ಎಟಿಎಂ ಕೇಂದ್ರಗಳಲ್ಲಿ ಕಳವು ಮಾಡುತ್ತಿದ್ದ ವಿಚಾರವೂ ಬಹಿರಂಗಗೊಂಡಿದೆ. ಮೂವರೂ ಆರೋಪಿಗಳ ವಿರುದ್ಧ ಚಿಕ್ಕಜಾಲ ಠಾಣೆಯಲ್ಲಿ 2, ಕೊಡಿಗೇಹಳ್ಳಿ ಠಾಣೆಯಲ್ಲಿ 1 ಹಾಗೂ ಯಲಹಂಕ ಠಾಣೆಯಲ್ಲಿ ದಾಖಲಾಗಿದ್ದ 1 ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಈಶಾನ್ಯ ವಿಭಾಗ ಡಿಸಿಪಿ ವಿಕಾಸ್ ಕುಮಾರ್ ವಿಕಾಸ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


